ಜನ ಮನದ ನಾಡಿ ಮಿಡಿತ

Advertisement

ಮೂಡಬಿದ್ರೆ: ಬಸ್‌ನಲ್ಲಿ ಯುವತಿಗೆ ಕಿರುಕುಳ; ವಿಡಿಯೋ ವೈರಲ್ ಬನ್ನಲ್ಲೇ ವೃದ್ಧ ಅರೆಸ್ಟ್

ಮೂಡಬಿದ್ರೆಯ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ಓರ್ವಳು ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ವ್ಯಕ್ತಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈತನಿಂದ ಯಾರಾದರೂ ತೊಂದರೆಗೊಳಗಾದವರು ಇದ್ದರೆ ನೇರವಾಗಿ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಮಾಹಿತಿ ನೀಡುವಂತೆ ಮೂಡಬಿದಿರೆಯ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚೆಗೆ ಖಾಸಗಿ ಬಸ್‌ನಲ್ಲಿ ಪ್ರಾಯದ ವ್ಯಕ್ತಿಯೋರ್ವ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿತ್ತು. ಈ ಬಗ್ಗೆ ಮೂಡಬಿದ್ರೆ ಪೊಲೀಸರು ವಿಚಾರಣೆ ನಡೆಸಿದಾಗ ಆರೋಪಿ ಕಾರ್ಕಳ ಅನೆಕೆರೆಯ ತರಕಾರಿ ಅಂಗಡಿ ಕಾರ್ಮಿಕ, ಬೆಳುವಾಯಿ ಕರಿಯನಂಗಡಿ ಕುಕ್ಕಡೇಲು ನಿವಾಸಿ ರೆಹ್ಮಾನ ಎನ್ನುವುದು ಪತ್ತೆಯಾಗಿದೆ. ವೈರಲ್ ವಿಡಿಯೋದಲ್ಲಿ ಯುವತಿಯ ಮುಖ ಚಹರೆ ಸರಿಯಾಗಿ ಕಂಡು ಬರದ ಕಾರಣ ಆಕೆಯನ್ನು ಗುರುತಿಸಲು ಅಸಾಧ್ಯವಾಗಿರುತ್ತದೆ. ಈ ಬಗ್ಗೆ ಆರೋಪಿ ರಹ್ಮಾನನನ್ನು ಠಾಣೆಗೆ ಕರೆಯಿಸಿ ವಿಚಾರಿಸಿದಾಗ ಆತನಿಗೂ ಸಂತ್ರಸ್ತ ಯುವತಿಯ ಬಗ್ಗೆ ಮಾಹಿತಿ ಇಲ್ಲ ಎನ್ನುವ ಮಾಹಿತಿ ನೀಡಿದ್ದಾನೆ. ಅದುದರಿಂದ ಸಂತ್ರಸ್ತ ಯುವತಿ ಅಥವಾ ಈ ವ್ಯಕ್ತಿಯಿಂದ ತೊಂದರೆಗೊಳಗಾದ ಯಾರಾದರೂ ಇದ್ದರೆ ನೇರವಾಗಿ ಮೂಡಬಿದ್ರೆ ಪೊಲೀಸ್ ಠಾಣೆಗೆ ಬಂದು ದೂರನ್ನು ನೀಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೂಡಬಿದ್ರೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ನಂದೇಶ್ ಪಿ.ಜಿ. ತಿಳಿಸಿದ್ದಾರೆ. ಆರೋಪಿ ಅಜೆಕಾರ್, ಅನೆಕರೆ ಸುತ್ತಮುತ್ತ ತರಕಾರಿ ಮಾರುತ್ತಿದ್ದು, ಯುವತಿಯರಿಗೆ ಕಿರುಕುಳ ನೀಡುವ ಚಾಳಿ ಇಟ್ಟುಕೊಂಡಿದ್ದ, ಈ ಹಿಂದೆಯೂ ಈತ ಇದೇ ರೀತಿ ವರ್ತಿಸಿದ್ದಾಗಿ ಆರೋಪ ಕೂಡ ಕೇಳಿಬಂದಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!