ದಕ್ಷಿಣ ಕನ್ನಡ : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಮಹಾಸಭೆಯು ಕೆ.ಜೆ.ಯು. ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಬಂಟ್ವಾಳ್ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ವುಡ್ ಲ್ಯಾಂಡ್ ಹೋಟೆಲ್ ಸಭಾಭವನದಲ್ಲಿ ಜು.25ರಂದು ಜರುಗಿತು.
ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ತಾರನಾಥ ಗಟ್ಟಿ ಕಾಪಿಕಾಡ್ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಬಂಟ್ವಾಳ್ ಅವರು ಕೆ.ಜೆ.ಯು. ಘಟಕದ ಕಾರ್ಯಚಟುವಟಿಕೆಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಮುಂದಿನ ಅವಧಿಗೆ ನೂತನ ಜಿಲ್ಲಾ ಸಮಿತಿಯನ್ನು ನೇಮಕ ಮಾಡಲಾಯಿತು. ಜಿಲ್ಲಾ ಸಮಿತಿಯ ಗೌರವಾಧ್ಯಕ್ಷರಾಗಿ ಹರೀಶ್ ಬಂಟ್ವಾಳ್, ಗೌರವ ಸಲಹೆಗಾರರಾಗಿ ರಿಚರ್ಡ್ ಲಸ್ರಾದೋ, ನೂತನ ಅಧ್ಯಕ್ಷರಾಗಿ ತಾರನಾಥ ಗಟ್ಟಿ ಕಾಪಿಕಾಡು, ಪ್ರಧಾನ ಕಾರ್ಯದರ್ಶಿಯಾಗಿ ಕೆನ್ಯೂಟ್ ಪಿಂಟೋ, ಕೋಶಾಧಿಕಾರಿಯಾಗಿ ಗಿರಿಧರ ಶೆಟ್ಟಿ , ಸಂಘಟನಾ ಕಾರ್ಯದರ್ಶಿಯಾಗಿ ಹಮೀದ್ ವಿಟ್ಲ ಆಯ್ಕೆಯಾದರು.
ಉಪಾಧ್ಯಕ್ಷರುಗಳಾಗಿ ಮಂದಾರ ರಾಜೇಶ್ ಭಟ್, ಲಕ್ಷ್ಮಣ ಕುಂದರ್, ಶರೀಫ್ ಜಟ್ಟಿಪಳ್ಳ, ಜ್ಯೋತಿ ಪ್ರಕಾಶ್ ಪುಣಚ ಆಯ್ಕೆಯಾದರು.
ಕಾರ್ಯದರ್ಶಿಗಳಾಗಿ ಶ್ರೀಮತಿ ವಾಯ್ಲೆಟ್ ಪಿರೇರಾ, ಶ್ರೀಮತಿ ಪೂಜಾಶ್ರೀ ವಿತೇಶ್ ಕೋಡಿ, ಶ್ರೀಮತಿ ಹೇಮಾ ಜಯರಾಮ ರೈ, ಗಣೇಶ್ ಕುಕ್ಕುದಡಿ ಆಯ್ಕೆಯಾದರು. ಸದಸ್ಯತ್ವ ಅಭಿಯಾನದ ಸಂಚಾಲಕರಾಗಿ ಈಶ್ವರ ವಾರಣಾಶಿಯವರನ್ನು ಆಯ್ಕೆ ಮಾಡಲಾಯಿತು.
ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ಈಶ್ವರ ವಾರಣಾಶಿ, ಗೋಪಾಲ ಅಂಚನ್, ಶಿವಪ್ರಸಾದ್ ಆಲೆಟ್ಟಿ, ರಾಮದಾಸ್ ವಿಟ್ಲ, ಶ್ರೀಮತಿ ಜಯಶ್ರೀ ಕೊಯಿಂಗೋಡಿ, ಶ್ರೀಧರ ಕಜೆಗದ್ದೆ, ರಮೇಶ್ ಪೆರ್ಲ, ರಮೇಶ್ ನೀರಬಿದಿರೆ, ವಿನಯ್ ಜಾಲ್ಸೂರು, ಕೆ.ಟಿ. ಬಾಗೀಶ್ ಕೊಯಿಕುಳಿ, ವಿನಯ್ ಕಲ್ಮಡ್ಕ, ಕುಶಾಂತ್ ಕೊರತ್ಯಡ್ಕ, ಧನರಾಜ್, ಶ್ರೀಮತಿ ರಮ್ಯಾ ಸತೀಶ್ ಕಳಂಜ, ಶ್ರೀಮತಿ ರೇಖಾ ಸುಭಾಷ್, ಫ್ಲಾಯ್ಡ್ ಜೀವನ್ ಫರ್ನಾಂಡೀಸ್ ಆಯ್ಕೆಯಾದರು. ಸುಳ್ಯ ಸುದ್ದಿ ಬಿಡುಗಡೆ ಪತ್ರಿಕೆಯ ವರದಿಗಾರ ಈಶ್ವರ ವಾರಣಾಶಿಯವರನ್ನು ಸದಸ್ಯತ್ವ ಅಭಿಯಾನದ ಸಂಚಾಲಕರನ್ನಾಗಿ ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಕೆಜೆಯು ಸದಸ್ಯತ್ವದ ಬಗ್ಗೆ ಚರ್ಚೆ ನಡೆಯಿತು.
ವೇದಿಕೆಯಲ್ಲಿ ಕೆ.ಜೆ.ಯು. ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ, ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ರಾಮದಾಸ್ ವಿಟ್ಲ, ಜ್ಯೋತಿಪ್ರಕಾಶ್ ಪುಣಚ, ರಿಚರ್ಡ್ ಲಸ್ರಾದೋ, ತಾರನಾಥ ಗಟ್ಟಿ ಕಾಪಿಕಾಡು, ಕೆನ್ಯೂನ್ ಪಿಂಟೋ ಉಪಸ್ಥಿತರಿದ್ದರು.
ಕೆ.ಜೆ.ಯು. ದ.ಕ. ಜಿಲ್ಲಾ ಘಟಕದ ಪದಾಧಿಕಾರಿಗಳು, ತಾಲೂಕು ಘಟಕದ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ನಮ್ಮ ಅಭಿಮತ ಸಂಸ್ಥೆಯಲ್ಲಿ ವರದಿಗಾರರಾಗಿ, ನಿರೂಪಕರಾಗಿ ಈ ಮೊದಲು ಸೇವೆ ಸಲ್ಲಿಸಿದ್ದ ಮಂದಾರ ರಾಜೇಶ್ ಭಟ್ಟರು ದಕ್ಷಿಣ ಕನ್ನಡ ಜಿಲ್ಲಾ ಜರ್ನಲಿಸ್ಟ್ ಯೂನಿಯನ್ ಇದರ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ಅಭಿಮತ ವಾಹಿನಿಯ ಮುಖ್ಯಸ್ಥರಾದ ಮಮತಾ ಶೆಟ್ಟಿ ಇವರು ಅಭಿನಂದಿಸಿದ್ದಾರೆ, ನಮ್ಮ ಅಭಿಮತ ಸಂಸ್ಥೆಯಲ್ಲಿ ಈ ಹಿಂದೆ ಕೆಲಸ ನಿರ್ವಹಿಸಿದ್ದ ಭಟ್ಟರು ಜಿಲ್ಲಾ ಜರ್ನಲಿಸ್ಟ್ ಯೂನಿಯನ್ ಇದರ ಉಪಾಧ್ಯಕ್ಷರಾಗಿ, ಪ್ರತಿನಿಧಿಯಾಗಿ ಇರುವುದು ನಮ್ಮ ಹೆಮ್ಮೆಯ ವಿಚಾರ, ನೇರ ನಡೆನುಡಿಯ ಮಂದಾರ ರಾಜೇಶ್ ಭಟ್ಟರು ಉತ್ತಮ ಬರಹಗಾರರಾಗಿದ್ದು, ಅತ್ಯುತ್ತಮ ವರದಿಗಾರರಾಗಿದ್ದು, ಮಾಧ್ಯಮ ನಿರೂಪಕರಾಗಿಯೂ ಸೇವೆ ಸಲ್ಲಿಸಿದವರಾಗಿದ್ದು, ಪರಿಸರ ಸಂರಕ್ಷಕರಾದ ಇವರಿಗೆ ಇತ್ತೀಚೆಗೆ ಗೌರವ ಡಾಕ್ಟರೇಟ್ ಲಭಿಸಿದ್ದು ಹೆಮ್ಮೆಯ ವಿಚಾರ, ಮಂದಾರ ರಾಜೇಶ್ ಭಟ್ಟರು ಇನ್ನಷ್ಟು ಸಾಧನೆ ಮಾಡಲಿ, ಅವರಿಗೆ ಸದಾ ನಮ್ಮ ಬೆಂಬಲವಿದೆ ಎಂದು ಶುಭ ಹಾರೈಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…