ಇತರೆ

ಚಿಕ್ಕಮಗಳೂರು; ಚೂರಿಯಿಂದ ಇರಿದು ತಂದೆಯನ್ನು ಕೊಂ*ದ ಕುಡುಕ ಮಗ

 

ಮದ್ಯಪಾನ ಮಾಡಿದ ಮತ್ತಿನಲ್ಲಿ ತಂದೆಯನ್ನ ಚಾ*ಕುವಿನಿಂದ ಇ*ರಿದು ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರಿನ ಆಲ್ದೂರು ಸಮೀಪದ ಗುಪ್ತಶೆಟ್ಟಿಹಳ್ಳಿಯಲ್ಲಿ ನಡೆದಿದೆ.

ಮಂಜುನಾಥ್ ಮಗನಿಂದಲೇ ಕೊಲೆಯಾದ ದುರ್ದೈವಿ. ರಂಜನ್ ಎಂಬಾತ ಕೊ*ಲೆಗೈದ ಆರೋಪಿಯಾಗಿದ್ದಾನೆ. ಪೋಷಕರ ನಡುವೆ ನಡೆದ ಗಲಾಟೆ ತಾರಕಕ್ಕೇರಿ ಈ ಕೃತ್ಯ ಎಸಗಿದ ಆರೋಪಿ ಬಳಿಕ ತಂದೆಯ ಅಂತ್ಯಸಂಸ್ಕಾರಕ್ಕೆ ಕೂಡಾ ಮುಂದಾಗಿದ್ದ ಎಂದು ತಿಳಿದು ಬಂದಿದೆ. ಆರೋಪಿ ರಂಜನ್ ಸಂಜೆ ಆಲ್ದೂರಿಗೆ ಹೋಗಿ ಸಂತೆ ಮುಗಿಸಿಕೊಂಡು, ಮದ್ಯಪಾನ ಮಾಡಿ ಮನೆಗೆ ಬಂದಿದ್ದ. ಈ ವೇಳೆ ತಂದೆ-ತಾಯಿ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದೆ. ಜಗಳ ಬಿಡಿಸಲು ಹೋದ ರಂಜನ್, ತಂದೆಗೆ ಹಿಂದಿನಿAದ ಚಾಕು ಇರಿದಿದ್ದಾನೆ. ಕೊನೆಗೆ ಜಗಳ ಬಿಡಿಸಿದ ತಾಯಿ ಚಾಕುವಿನಿಂದ ಆದ ಗಾಯಕ್ಕೆ ಅರಿಶಿನ ಪುಡಿ ಹಚ್ಚಿ ಮಲಗಿಸಿದ್ದಾರೆ. ರಕ್ತ*ಸ್ರಾವ ಹೆಚ್ಚಾಗಿ ಮಂಜುನಾಥ್ ಸಾವನ್ನಪ್ಪಿದ್ದಾರೆ. ಈ ನಡುವೆ ರಂಜನ್ ಒಬ್ಬೊಬ್ಬರ ಬಳಿ ಒಂದೊಂದು ಕಥೆ ಕಟ್ಟಿದ್ದಾನೆ. ತಂದೆ-ತಾಯಿ ಜಗಳದಲ್ಲಿ ನಾನು ಬಿಡಿಸುವ ವೇಳೆ ತಂದೆಗೆ ಮಚ್ಚು ತಾಗಿ ಗಾಯವಾಗಿ ತೀರಿಕೊಂಡ್ರು ಎಂದು ಕೆಲವರ ಬಳಿ ಹೇಳಿದ್ದನಂತೆ. ಇನ್ನೂ ಕೆಲವರ ಬಳಿ ತಂದೆ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಕತೆ ಕಟ್ಟಿದ್ದ. ಆರೋಪಿಯ ಕಥೆ ಕೇಳಿದ್ದವರು ನಿಜವೆಂದು ಮಂಜುನಾಥ್ ಶ*ವ ಸಂಸ್ಕಾರಕ್ಕೆ ತಯಾರಿ ಮಾಡಿಕೊಂಡಿದ್ದರು. ಪ್ರಕರಣದ ಮಾಹಿತಿ ಪಡೆದ ಆಲ್ದೂರು ಪೊಲೀಸರು, ಅನುಮಾನದ ಮೇಲೆ, ರಂಜನ್‌ನನ್ನು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…

6 days ago

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…

6 days ago

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…

6 days ago

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…

7 days ago

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…

7 days ago

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…

7 days ago