ಜನ ಮನದ ನಾಡಿ ಮಿಡಿತ

Advertisement

ಹಾವೇರಿ;ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ

 

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. ಅರ್ನವಿ ಯಶ್ ಸಾವನ್ನಪ್ಪಿದ ವ್ಯಕ್ತಿಗಳಾಗಿದ್ದಾರೆ.

ಘಟನೆಯಲ್ಲಿ ಆರು ಮಂದಿ ಗಂಭೀರ ಗಾಯಗೊಂಡಿದ್ದು, 29 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬಸ್ ಮಹಾರಾಷ್ಟ್ರದ ಸಾಂಗ್ಲಿಯಿAದ ತಮಿಳುನಾಡು ಕಡೆ ಸಂಚರಿಸುತ್ತಿತ್ತು. ಈ ವೇಳೆ ಮೊಟೇಬೆನ್ನೂರು ಗ್ರಾಮದ ಬಳಿ ಬಸ್ ಮುಂದೆ ಕಾರು ಬಂದಿದೆ. ಕಾರಿಗೆ ಗುದ್ದುವುದನ್ನು ತಪ್ಪಿಸಲು ಹೋಗಿ ಬಸ್ ಚಾಲಕ ಬ್ರೇಕ್ ಹಾಕಿದ್ದಾನೆ. ಪರಿಣಾಮ ಡಿವೈಡರಿಗೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿ ಬಿದ್ದಿದೆ.

 

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬ್ಯಾಡಗಿ ಪೊಲೀಸರು ಹಾಗೂ ಎಸ್‌ಪಿ ಯಶೋದಾ ವಂಟಗೋಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸತತ ಒಂದೂವರೆ ಗಂಟೆಗಳ ಕಾರ್ಯಚರಣೆ ನಡೆಸಿ ಬಸ್ ಮೇಲಕ್ಕೆ ಎತ್ತುವ ಕಾರ್ಯ ನಡೆದಿದೆ. ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಗಾಯಾಳುಗಳ ರಕ್ಷಣಾ ಕಾರ್ಯ ಮಾಡಿದ್ದು ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

ಕೊಚ್ಚಿ: ವಿಜೃಂಭಣೆಯ ಕೇರಳ-ಕರ್ನಾಟಕ ಜಾನಪದ ಉತ್ಸವ…!

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

error: Content is protected !!