ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. ಅರ್ನವಿ ಯಶ್ ಸಾವನ್ನಪ್ಪಿದ ವ್ಯಕ್ತಿಗಳಾಗಿದ್ದಾರೆ.
ಘಟನೆಯಲ್ಲಿ ಆರು ಮಂದಿ ಗಂಭೀರ ಗಾಯಗೊಂಡಿದ್ದು, 29 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬಸ್ ಮಹಾರಾಷ್ಟ್ರದ ಸಾಂಗ್ಲಿಯಿAದ ತಮಿಳುನಾಡು ಕಡೆ ಸಂಚರಿಸುತ್ತಿತ್ತು. ಈ ವೇಳೆ ಮೊಟೇಬೆನ್ನೂರು ಗ್ರಾಮದ ಬಳಿ ಬಸ್ ಮುಂದೆ ಕಾರು ಬಂದಿದೆ. ಕಾರಿಗೆ ಗುದ್ದುವುದನ್ನು ತಪ್ಪಿಸಲು ಹೋಗಿ ಬಸ್ ಚಾಲಕ ಬ್ರೇಕ್ ಹಾಕಿದ್ದಾನೆ. ಪರಿಣಾಮ ಡಿವೈಡರಿಗೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿ ಬಿದ್ದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬ್ಯಾಡಗಿ ಪೊಲೀಸರು ಹಾಗೂ ಎಸ್‌ಪಿ ಯಶೋದಾ ವಂಟಗೋಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸತತ ಒಂದೂವರೆ ಗಂಟೆಗಳ ಕಾರ್ಯಚರಣೆ ನಡೆಸಿ ಬಸ್ ಮೇಲಕ್ಕೆ ಎತ್ತುವ ಕಾರ್ಯ ನಡೆದಿದೆ. ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಗಾಯಾಳುಗಳ ರಕ್ಷಣಾ ಕಾರ್ಯ ಮಾಡಿದ್ದು ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…