5 ಲಕ್ಷ ರೂ. ಮೌಲ್ಯದ ಸೊತ್ತು ವಶಕ್ಕೆ ಪಡೆದುಕೊಳ್ಳುವುದರ ಜೊತೆಗೆ ಸರಗಳ್ಳತನದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಉಪ್ಪಿನಂಗಡಿ ಪೊಲೀಸರು ನಡೆಸಿದ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಸರಗಳ್ಳತನ ಆರೋಪಿಯನ್ನು ಬಂಧಿಸಿ, ಚಿನ್ನಾಭರಣ ಮತ್ತು ಕದ್ದ ಮೋಟಾರ್ ಸೈಕಲ್ ಸೇರಿದಂತೆ ಸುಮಾರು 5.05 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನನ್ನು ಸುಳ್ಯದ ಅಲೆಟ್ಟಿ ನಿವಾಸಿ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಬೆಟ್ಟುವಿನ ನೆಲ್ಯಾಡಿಯಲ್ಲಿ ಜೂನ್ 4 ರಂದು ಈ ಘಟನೆ ನಡೆದಿದ್ದು, ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಮಹಿಳೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದರು. ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸರು ತನಿಖೆ ಆರಂಭಿಸಿ ಪುತ್ತೂರಿನ ನೆಕ್ಕಿಲಾಡಿಯ ಅಬ್ದುಲ್ ರೆಹಮಾನ್‌ನನ್ನು ಬಂಧಿಸಿದ್ದಾರೆ. ಪುತ್ತೂರು ಉಪವಿಭಾಗದ ಡಿವೈಎಸ್ಪಿ ಅರುಣ್ ನಾಗೇಗೌಡ ಅವರ ಮಾರ್ಗದರ್ಶನದಲ್ಲಿ ಉಪ್ಪಿನಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್ ಅವರ ನೇತೃತ್ವದಲ್ಲಿ ಠಾಣೆಯ ಸಿಬ್ಬಂದಿಯೊಂದಿಗೆ ಕಾರ್ಯಾಚರಣೆ ನಡೆಸಲಾಗಿದೆ.



