ಕರಾವಳಿಯಲ್ಲಿ ಕೆಂಪು ಕಲ್ಲಿನ ಉದ್ಯಮಕ್ಕೆ ಹೊಡೆತ ಬಿದ್ದ ಪರಿಣಾಮ ಕೆಲಸವಿಲ್ಲದೇ ಕಳ್ಳತನ ಮಾಡಿದ ಯುವಕನನ್ನು ಬಂಧಿಸಿದ ಘಟನೆ ಪುತ್ತೂರಿನ ಈಶ್ವರಮಂಗಲದಲ್ಲಿ ನಡೆದಿದೆ.
ನೆಟ್ಟಣಿಗೆ ಮುಡ್ನೂರು ಮುಂಡ್ಯ ನಿವಾಸಿ ದಯಾನಂದ ನಾಯ್ಕ ಎಂಬಾತ ಬಂಧಿತ ಆರೋಪಿ. ಕಳೆದ 5 ದಿನಗಳ ಹಿಂದೆ ಈಶ್ವರಮಂಗಲದಲ್ಲಿ ಕಳ್ಳತನ ನಡೆಯುತ್ತಿದ್ದು, ಈಶ್ವರಮಂಗಲ ಪೇಟೆಯ ನಿವಾಸಿ ಶೋಭಾ ಕೃಷ್ಣರಾಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಪಾಟಿನ ಬೀಗ ಮುರಿದು 31 ಗ್ರಾಂ ಚಿನ್ನ ಹಾಗೂ 5 ಸಾವಿರ ನಗದುದನ್ನು ಕಳ್ಳತನ ಮಾಡಿದ್ದಾನೆ.
ಕೆಂಪು ಕಲ್ಲಿನ ಲೋಡಿಂಗ್ ಕೆಲಸ ಮಾಡುತ್ತಿದ್ದ ಈತ ವಿವಿಧ ಸಂಘ ಸಂಸ್ಥೆಗಳಲ್ಲಿ ಸಾಲ ಮಾಡಿಕೊಂಡಿದ್ದ ಕೆಲಸವಿಲ್ಲದೇ ಸಾಲ ಹಿಂತಿರುಗಿಸಲಾಗದೇ ಕಂಗೆಟ್ಟಿದ್ದ ಆರೋಪಿ ಕಳ್ಳತನದ ಹಾದಿಯನ್ನು ಹಿಡಿದಿದ್ದಾನೆಂದು ಸಾರ್ವಜನಿಕರಿಂದ ಮಾಹಿತಿ ಲಭ್ಯವಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…