ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ; ಕೇರಳದ ಪೋಲೀಸರಿಗೆ ಮೋಸ್ಟ್ ವಾಂಟೆಡ್ ಆರೋಪಿಯ ಕಾರಿಗೆ ಅಪಘಾ*ತ

ಕೇರಳದ ಪೋಲೀಸರಿಗೆ ಮೋಸ್ಟ್ ವಾಂಟೆಡ್ ಆರೋಪಿಯೋರ್ವನ ಕಾರು ಬಂಟ್ವಾಳದ ಮಂಚಿಯಲ್ಲಿ ಅಪಘಾ*ತವಾಗಿದೆ.

ಕೇರಳ ನಿವಾಸಿ ಮೊಹಮ್ಮದ್ ರಾಝಿಕ್ ಎಂಬಾತನ ಕಾರು ಮಂಚಿಯಲ್ಲಿ ಇನ್ನೊಂದು ಕೇರಳ ಮೂಲದ ಕಾರಿಗೆ ಡಿಕ್ಕಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ. ಈತನ ಜೊತೆ ಸ್ನೇಹಿತರಾದ ಸಿಬಿನ್, ಸಯ್ಯದ್ ಮಹಮ್ಮದ್ ಆಲ್ ಅಮೀನ್ ಎಂಬವರು ಕೂಡ ಕಾರಿನಲ್ಲಿ ಇದ್ದರು. ಕೇರಳ ರಾಜ್ಯದ ಮಂಜೇಶ್ವರ ಪೋಲೀಸ್ ಠಾಣೆಯಲ್ಲಿ ದಾಖಲಾದ ಆರೋಪಿಯಾಗಿರುವ ಈತ ಹಳೆಯ ಆರೋಪಿ ಕೂಡ ಆಗಿದ್ದ ಎನ್ನಲಾಗಿದೆ.

ಹಾಗಾಗಿ ಪೋಲೀಸರ ತಂಡ ಈತನನ್ನು ಬಂಧನಕ್ಕೆ ಬಲೆ ಬೀಸಿತ್ತು. ಈತನ ಕಾರು ಬಂಟ್ವಾಳದ ಕಡೆ ಹೋಗುತ್ತಿರುವ ಖಚಿತ ಮಾಹಿತಿ ಪಡೆದ ಕೇರಳ ಪೋಲೀಸರ ತಂಡ ಈತನ ಬೆನ್ನ ಹಿಂದೆ ಬಿದ್ದಿದ್ದರು. ಪೋಲೀಸರ ಬೇಟೆಯ ವಿಚಾರ ತಿಳಿದ ಈತ ಅತಿಯಾದ ವೇಗದೊಂದಿಗೆ ಬಂದು ಮಂಚಿಯ ಮೋಂತಿಮಾರು ಎಂಬಲ್ಲಿ ಕೇರಳ ಮೂಲದ ಆಲ್ಟೊ ಕಾರೊಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದ. ಆದರೆ ಪೋಲೀಸರ ಸಮಯ ಪ್ರಜ್ಞೆಯಿಂದ ಈತನನ್ನು ಬಂಧಿಸಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಬೇಟಿ ನೀಡಿದ್ದು, ಅಪಘಾತ ಪ್ರಕರಣ ದಾಖಲಾಗುತ್ತಾ ಎಂದು ಇನ್ನಷ್ಟೇ ಗೊತ್ತಾಗಬೇಕಿದೆ.

ಮಂಚಿಯಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮತ್ತು ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಯಾವ ಕ್ರಮ ಕೈಗೊಳ್ಳುತ್ತದೆ ಎಂಬ ಹೆಚ್ಚಿನ ಮಾಹಿತಿ ದೊರಯಬೇಕಷ್ಟೇ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!