ಕಳೆದ ಮೂರು ವರ್ಷಗಳಿಂದ ಪಟ್ಲ ಶ್ರೀ ಸತೀಶ್ ಶೆಟ್ಟಿ ನೇತೃತ್ವದ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ, ರಂಗಭೂಮಿ, ದೈವಾರಾಧನೆ ಮತ್ತು ಕಂಬಳ ಕ್ಷೇತ್ರದ ಸಾವಿರಾರು ಕಲಾವಿದರಿಗೆ ಮಂಗಳೂರು ಅಂಚೆ ವಿಭಾಗದ ಸಹಯೋಗದಲ್ಲಿ ಉಚಿತವಾಗಿ ಅಪಘಾತ ವಿಮಾ ಸುರಕ್ಷೆಯನ್ನು ಪ್ರಾಯೋಜಿಸುತ್ತಿದ್ದು ಇತ್ತೀಚೆಗೆ ಅಪಘಾತಕ್ಕೊಳಗಾಗಿ ನಿಧನರಾದ ಯಕ್ಷಗಾನ ಕಲಾವಿದರಾದ ಆನಂದ ಮತ್ತು ಪ್ರವೀತ್ ಅವರ ಕುಟುಂಬಗಳಿಗೆ ತಲಾ ರೂ.ಹತ್ತು ಲಕ್ಷದ ವಿಮಾ ಪರಿಹಾರವನ್ನು ವಿತರಣೆ ಮಾಡಲಾಯಿತು.
ಹಿರಿಯ ಅಂಚೆ ಅಧೀಕ್ಷಕರ ಕಚೇರಿ ಬಲ್ಮಠ ಇಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪಟ್ಲ ಸತೀಶ್ ಶೆಟ್ಟಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಪರಿಹಾರ ಮೊತ್ತದ ಚೆಕ್ ನ್ನು ವಿತರಿಸಿದ್ದಾರೆ. ಪಟ್ಲ ಫೌಂಡೇಶನ್ ಮೂಲಕ ಎಲ್ಲಾ ಕ್ಷೇತ್ರದ ಕಲಾವಿದರಿಗೆ ವಿವಿಧ ಕಲ್ಯಾಣ ಯೋಜನೆಗಳನ್ನು ಹಮ್ಮಿಕೊಂಡಿದ್ದು ಇದರಿಂದ ಬಹಳಷ್ಟು ಕಲಾವಿದರಿಗೆ ಮತ್ತು ಕುಟುಂಬದವರಿಗೆ ಪ್ರಯೋಜನವಾಗಿದೆ ಎಂದ್ರು. ಪಟ್ಲ ಫೌಂಡೇಶನ್ ನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ, ಕೋಶಾಧಿಕಾರಿ ಸಿ ಎ ಸುದೇಶ್ ಕುಮಾರ್ ರೈ, ಜತೆ ಕಾರ್ಯದರ್ಶಿ ರವಿಚಂದ್ರ ಶೆಟ್ಟಿ, ಐ ಪಿ ಪಿ ಬಿ ರೀಜನಲ್ ಮ್ಯಾನೇಜರ್ ಶ್ರೀನಿವಾಸ ಹೊಸಮನಿ, ಉಪ ಅಂಚೆ ಅಧೀಕ್ಷಕ ದಿನೇಶ್ ಪಿ ಅತಿಥಿಗಳಾಗಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಕೇಂದ್ರೀಯ ವಿದ್ಯಾಲಯಗಳ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಅನೇಕ ಪದಕಗಳ ಸಾಧನೆ ಮಾಡಿದ ಅಂಚೆ ಅಧೀಕ್ಷಕರ ಕಚೇರಿ ಸಿಬ್ಬಂದಿ ಅಶ್ವಿನಿ ಮತ್ತು ಅಭಿಜಿತ್ ನಾಯ್ಕ್ ಅವರ ಸುಪುತ್ರ ತನಯ ಅವರನ್ನು ಹಾಗೂ ಅಂಚೆ ಉಳಿತಾಯ ಖಾತೆಗಳಲ್ಲಿ ಗಣನೀಯ ಸಾಧನೆಮಾಡಿದ ಅಂಚೆ ಸಿಬ್ಬಂದಿಗಳನ್ನು ಸಮ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಐಪಿಪಿಬಿಯ ಸುಬ್ರಮಣ್ಯಂ, ಸಿಹಾಸ್, ಆದಿತ್ಯ ಬಿರ್ಲಾದ ರಮೇಶ್ ಅನಂತುಲಾ, ರಿಲಯೆನ್ಸ್ ನ ನಟರಾಜ್, ಅಂಚೆ ನಿರೀಕ್ಷಕರಾದ ಪ್ರದೀಪ್ ಭಂಡಾರಿ, ಸುಪ್ರಿಯಾ ಮೊದಲಾದವರು ಉಪಸ್ಥಿತರಿದ್ದರು. ಉಪ ಅಧೀಕ್ಷಕ ದಿನೇಶ್ ಪಿ ಸ್ವಾಗತಿಸಿ ಸುಭಾಷ್ ಸಾಲಿಯಾನ್ ರವರು ವಂದಿಸಿದರು. ಕಾರ್ಯಕ್ರಮವನ್ನು ದಯಾನಂದ ಪಿ ಕತ್ತಲಸಾರ್ ನಿರೂಪಿಸಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…