ಉಡುಪಿ ಪೊಲೀಸರಿಂದ ಬಂಧಿಸಲ್ಪಟ್ಟ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬ್ರಹ್ಮಾವರದ ಮ್ಯಾಜಿಸ್ತ್ರೇಟ್ ನ್ಯಾಯಾಲಯ ಆದೇಶಿಸಿದೆ.
ಬ್ರಹ್ಮಾವರದಲ್ಲಿ ತಿಮರೋಡಿ ಅವರ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಅವರನ್ನು ಮ್ಯಾಜಿಸ್ಟ್ರೇಟರ ಎದುರು ಹಾಜರುಪಡಿಸಲಾಗಿತ್ತು. ಬಿ.ಜೆ.ಪಿ.ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಮಾನಹಾನಿ ಮಾಡಿರುವರೆಂಬ ಆರೋಪ ಮಹೇಶ್ ಶೆಟ್ಟಿ ಅವರ ಮೇಲಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು. ಮಹೇಶ್ ಶೆಟ್ಟಿ ಅವರಿಗೆ ಎರಡು ಬಾರಿ ನೋಟೀಸು ನೀಡಲಾಗಿತ್ತು, ಅವರು ವಿಚಾರಣೆಗೆ ಹಾಜರಾಗಿರಲಿಲ್ಲ ಎಂದು ಉಡುಪಿ ಎಸ್.ಪಿ. ಹರಿರಾಂ ಶಂಕರ್ ತಿಳಿಸಿದ್ದಾರೆ.
ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 353(2) ಮತ್ತು 352ರನ್ವಯ ಮಹೇಶ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ. ತಿಮರೋಡಿ ಅವರನ್ನುಬೆಳ್ತಂಗಡಿಯಿಂದ ಪೊಲೀಸರು ವಶಕ್ಕೆ ಪಡೆದುಕೊಂಡು ಉಡುಪಿಗೆ ಕರೆತರುವಾಗ ಕಾರ್ಕಳದಲ್ಲಿ ರಸ್ತೆ ಬದಿ ನೆರೆದಿದ್ದ ಹಿಂದೂ ಕಾರ್ಯಕರ್ತರು ‘ಮಹೇಶಣ್ಣನಿಗೆ ಜೈ’ ಎಂದು ಜೈಕಾರ ಹಾಕಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆ ಎದುರು ಕೂಡಾ ಮಹೇಶ್ ಶೆಟ್ಟಿ ಬೆಂಬಲಿಗರು ನೆರೆದಿದ್ದರು ಹಾಗು ಜೈಕಾರ ಹಾಕಿದ್ದರು. ಈ ಸಂದರ್ಭ ಮಾತನಾಡಿದ್ದ ಮಹೇಶ್ ಶೆಟ್ಟಿ ತನ್ನ ಜೀವಕ್ಕೇನಾದರೂ ಆದರೆ ಅದಕ್ಕೆ ಬಿ.ಜೆ.ಪಿ. ಮತ್ತು ರಾಜ್ಯ ಸರಕಾರ ಕಾರಣ ಎದು ಆಕ್ರೋಶದಿಂದ ನುಡಿದಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…