ಇತರೆ

ಉಡುಪಿ: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ತೆಗೆದುಕೊಂಡು ಕರೆತರುತ್ತಿರುವಾಗ ಪೊಲೀಸರಿಗೆ ಅಡ್ಡಿ..!

ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ತೆಗೆದುಕೊಂಡು ಕರೆತರುತ್ತಿರುವಾಗ ಪೊಲೀಸರಿಗೆ ಅಡ್ಡಿ ಪಡಿಸಿದ ಆರೋಪದ ಮೇರೆಗೆ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

 

ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025 ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ಪಡೆದುಕೊಂಡು ಬ್ರಹ್ಮಾವರ ಠಾಣೆಗೆ ಕರೆತರುತ್ತಿರುವಾಗ ಅವರ ಬೆಂಬಲಿಗರು ಪೊಲೀಸ್ ವಾಹನಗಳನ್ನು ಹಿಂಬಾಲಿಸಿಕೊಂಡು ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಬಂದು ಕರ್ತವ್ಯಕ್ಕೆ ಅಡ್ಡಿ ಪಡಿಸಿಡಿಸಿದ್ದಾರೆ. ಸೂಚನೆ ನೀಡಿದರೂ ಪಾಲಿಸದೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸ್ಮಾರ್ ಬಳಿ ಉಡುಪಿ ಜಿಲ್ಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಇಲಾಖಾ ವಾಹನಕ್ಕೆ ಗುದ್ದಿದ್ದು, ಈ ಕುರಿತಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಸಂಖ್ಯೆ 99/2025 ಕಲಂ 132, 121(1), 281, 3(5) ಬಿ ಎನ್ ಎಸ್ 2023 ಮತ್ತು ಕಲಂ 3 ಕೆಪಿಡಿಎಲ್ ಆಕ್ಟ್ ರಂತೆ ಪ್ರಕರಣ ದಾಖಲಾಗಿದೆ.

ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಉಜಿರೆ ನಿವಾಸಿಗಳಾದ ಸೃಜನ್ ಎಲ್, ಹಿತೇಶ್ ಶೆಟ್ಟಿ, ಸಹನ್ ಎಂಬವರನ್ನು ದಸ್ತಗಿರಿ ಮಾಡಲಾಗಿದ್ದು, ನ್ಯಾಯಾಲಯ ಆರೋಪಿತರಿಗೆ ನ್ಯಾಯಾಂಗ ಬಂಧನ ವಿದಿಸಿರುತ್ತದೆ. ಜೊತೆಗೆ ಆರೋಪಿತರು ಕೃತ್ಯಕ್ಕೆ ಬಳಿಸಿದ ಕೆ ಎ 70ಒ3048 ಬಿಳಿ ಬಣ್ಣದ ಶಿಫ್ಟ್ ಕಾರನ್ನು ವಶಕ್ಕೆ ಪಡೆಯಲಾಗಿರುತ್ತದೆ ಎಂದು ಉಡುಪಿ ಪೊಲೀಸರ ಪ್ರಕಟಣೆ ತಿಳಿಸಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…

8 hours ago

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

3 days ago

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  …

3 days ago

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

  ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…

4 days ago

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…

6 days ago