ಬಂಟ್ವಾಳ ತಾಲೂಕಿನಾದ್ಯಂತ ಬೀದಿ ನಾಯಿಗಳ ಹಾವಳಿ ತಡೆಗಟ್ಟಿ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ತಹಶಿಲ್ದಾರರಿಗೆ ಎಸ್‌ಡಿಪಿಐ ನಿಯೋಗದಿಂದ ಮನವಿ ಸಲ್ಲಿಸಿದ್ದಾರೆ.

ಬಂಟ್ವಾಳ ತಾಲ್ಲೂಕಿನೆಲ್ಲೆಡೆ ಬೀದಿ ನಾಯಿಗಳಿಂದ ಸಾರ್ವಜನಿಕರು ಧಾಳಿಗೊಳಗಾಗುತ್ತಿದ್ದು, ಈ ಕುರಿತಂತೆ ತಾಲೂಕಿನ ವಿವಿಧ ಪ್ರದೇಶಗಳಿಂದ ನಿರಂತರವಾಗಿ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ತುರ್ತು ಪರಿಹಾರ ಕ್ರಮ ಅಗತ್ಯವಾಗಿದೆ. ಶಾಲೆಗೆ ಹಾಗೂ ಮದರಸಕ್ಕೆ ಹೋಗುವ ಮಕ್ಕಳು ಹಾಗೂ ಹಿರಿಯ ನಾಗರಿಕರು ಭಯದಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಸೇರಿದಂತೆ ತಾಲೂಕು ವ್ಯಾಪ್ತಿಯಲ್ಲಿರುವ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸುವಂತೆಯೂ, ಸಾರ್ವಜನಿಕರಿಗೆ ಗರಿಷ್ಟ ಭದ್ರತೆ ಒದಗಿಸುವಂತೆಯೂ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಶಾಹುಲ್ ಹಮೀದ್ ಎಸ್ ಎಚ್ ನೇತೃತ್ವದ ನಿಯೋಗದಿಂದ ತಹಶೀಲ್ದಾರ್ ಅರ್ಚನಾ ಭಟ್ ಅವರಿಗೆ ಮನವಿಯನ್ನು ಸಲ್ಲಿಸಿದ್ದಾರೆ. ಇನ್ನು ಈ ಸಂಧರ್ಭದಲ್ಲಿ ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ, ಉಪಾಧ್ಯಕ್ಷ ಇಕ್ಬಾಲ್ ಇಝಾನ್, ಕಾರ್ಯದರ್ಶಿ ಕಬೀರ್ ಅಕ್ಕರಂಗಡಿ, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.



