ಗಾನವಿ ಪೂಜಾರಿ ಮಾರ್ನಾಡು ಮೂಡುಬಿದ್ರೆ ಈಕೆಯ ತಂದೆ ಹೆಸರು ಸುರೇಂದ್ರ ಸಿ ಪೂಜಾರಿ ತಾಯಿ ಆಶಾ ಸುರೇಂದ್ರ ಪೂಜಾರಿ ಸೈಂಟ್ ಥೋಮಸ್ ಆಂಗ್ಲ ಮಾಧ್ಯಮ ಶಾಲೆ ಅಲಂಗಾರಿನಲ್ಲಿ 6ನೇ ತರಗತಿಯಲ್ಲಿ ಓದುತ್ತಿರುವ ವಿಧ್ಯಾರ್ಥಿನಿ ಇವಳು.
ಸಂಗೀತ, ಯಕ್ಷಗಾನ, ಭಜನೆ, ನೃತ್ಯ ,ಕುಣಿತ ಭಜನೆ, ಏಕಪಾತ್ರ ಅಭಿನಯ ಹೀಗೆ ಎಲ್ಲಾ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದಾಳೆ . ಇವಳು ಏಕಪಾತ್ರ ಅಭಿನಯದಲ್ಲಿ ನಟಿಸಿ ಪ್ರೋತ್ಸಾಹಕ ಮತ್ತು ವಿವಿಧ ಬಹುಮಾನಗಳನ್ನು ಗಳಿಸಿರುತ್ತಾರೆ. ಪ್ರತಿಭಾ ಕಾರಂಜಿಯಲ್ಲಿ ನಡೆದ ತಾಲೂಕು ಮಟ್ಟದ ಕಥೆ ಹೇಳುವುದರಲ್ಲಿ ಪ್ರಥಮ ಸ್ಥಾನ, ರಾಜ್ಯಮಟ್ಟದ ಕುಣಿತ ಭಜನೆಯಲ್ಲಿ ಭಾಗವಹಿಸುವಿಕೆ. ಸಾರ್ವಜನಿಕ ವಲಯದಲ್ಲಿ ನಡೆಯುವ ಗಣೇಶೋತ್ಸವ ಅಥವಾ ಶಾರದೋತ್ಸವ ಇರಬಹುದು ಮುಂತಾದ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನವನ್ನು ಪಡೆದಿರುವ ವಾಯ್ಸ್ ಆಫ್ ಆರಾಧನ ಸಂಸ್ಥೆಯ ಬಹುಮುಖ ಕಲಾ ಬಾಲೆ.
ಪದ್ಮಶ್ರೀ ಮೇಡಂ ಇವರ ನೇತೃತ್ವದಲ್ಲಿ ನಡೆಯುವ ಹಲವಾರು ಕಡೆ ನಡೆದ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಅಭಿನಂದನೆ ಪತ್ರವನ್ನು ಪಡೆದಿರುತ್ತಾಳೆ. ವಾಯ್ಸ್ ಆಫ್ ಆರಾಧನಾ ವತಿಯಿಂದ ನಡೆಯುವಂತ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಇಷ್ಟರ ತನಕ 60ಕ್ಕೂ ಹೆಚ್ಚು ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರ ಮೆಚ್ಚುಗೆಯನ್ನು ಪಾತ್ರಳಾಗಿದ್ದಾಳೆ. ಮೈಸೂರಿನಲ್ಲಿ ನಡೆದಂತಹ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರ ಪ್ರಶಂಸೆಗೆ ದೊರೆತಿರುತ್ತದೆ. ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ ನವರು ಕೊಡುವ ಕಲಾ ರತ್ನ ಪ್ರಶಸ್ತಿ, ಸಮಾಜ ಕಲ್ಯಾಣ ಸಂಸ್ಥೆ ಬೆಂಗಳೂರು ಹಾಗೂ ವಿಶ್ವ ಕನ್ನಡ ಜಾನಪದ ಪರಿಷತ್ ಬೆಂಗಳೂರು ಇದರ ವತಿಯಿಂದ ನಡೆದಂತಹ ರಾಷ್ಟ್ರೀಯ ಮಹಿಳಾ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಸುವರ್ಣ ಕರ್ನಾಟಕ ಮಾಧ್ಯಮಯೂರಿ ಪ್ರಶಸ್ತಿಗಳು ಲಭಿಸಿರುತ್ತದೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…