ದಕ್ಷಿಣ ಕನ್ನಡದ ಪುತ್ತೂರಿನ ಆರ್ಯಾಪು ಗ್ರಾಮ ಪಂಚಾಯತಿನ ಆರ್ಯಾಪು ವಾರ್ಡ್-2 ಕ್ಕೆ ನಡೆದ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಜಯಭೇರಿ ಗಳಿಸಿದ್ದು ಬಿಜೆಪಿಗೆ ಸೋಲುಂಟಾಗಿದೆ. ಪುತ್ತಿಲ ಪರಿವಾರದ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ 499 ಮತಗಳನ್ನು ಪಡೆದು ಜಯಗಳಿಸಿದ್ದಾರೆ.ವಾರ್ಡ್-2ರ ಹಿಂದುಳಿದ ವರ್ಗ ಎ ಮೀಸಲು ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಸದಸ್ಯ ರುಕ್ಮಯ್ಯ ಮೂಲ್ಯರವರ ರವರ ನಿಧನದಿಂದ ತೆರವಾದ ಸ್ಥಾನಕ್ಕೆ ಜು.23ರಂದು ನಡೆದ ಉಪ ಚುನಾವಣೆಯಲ್ಲಿ ಒಟ್ಟು 1237 ಮತಗಳ ಪೈಕಿ 999 ಮತಗಳು ಚಲಾವಣೆಯಾಗಿದೆ.ಇದರಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ 499 ಮತ, ಕಾಂಗ್ರೆಸ್ ಬೆಂಬಲಿತ ಪುರುಷೋತ್ತಮ ಪ್ರಭು 353 ಮತ ಗಳನ್ನು ಪಡೆದರೆ, ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಗದೀಶ ಭಂಡಾರಿ ಕೇವಲ 140 ಮತಗಳನ್ನು ಪಡೆದುಮೂರನೇ ಸ್ಥಾನಕ್ಕೆ ತಳ್ಳಳ್ಪಟ್ಟಿದ್ದಾರೆ.ಈ ಬಾರಿ ಆರ್ಯಾಪುವಿನಲ್ಲಿ ಪುತ್ತಿಲ ಪರಿವಾರ ಜಯಭೇರಿ ಬಾರಿಸಿದೆ.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…