ಕೆ.ಎಸ್.ಆರ್.ಟಿ. ಬಸ್ ರಸ್ತೆ ಪಕ್ಕದ ಟೋಲ್ ಗೇಟ್ ನ ಸೂಚನಾ ಫಲಕಕ್ಕೆ ಢಿಕ್ಕಿ ಹೊಡೆದ ಪರಿಣಾಮ 12 ಮಂದಿ ಗಾಯಗೊಂಡ ಘಟನೆ ಸಾಸ್ತಾನ ಟೋಲ್ ಸಮೀಪ ನಡೆದಿದೆ.
ಬಸ್ ಚಾಲಕನ ನಿಯಂತ್ರಣ ತಪ್ಪಿ ಟೋಲ್ ನಿಂದ 500 ಮೀಟರ್ ಹಿಂದಿದ್ದ ಸೂಚನಾ ಫಲಕಕ್ಕೆ ಢಿಕ್ಕಿಯಾಗಿದೆ. ಇಳಕಲ್ ನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ 36 ಮಂದಿ ಪ್ರಯಾಣಿಕರಿದ್ದು, ಅಪಘಾತದ ರಭಸಕ್ಕೆ 12 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಓರ್ವ ಮಹಿಳೆಗೆ ಗಂಭೀರ ಗಾಯವಾಗಿದೆ. ಉಳಿದ ಪ್ರಯಾಣಿಕರು ಹಾಗೂ ಬಸ್ಸಿನ ಚಾಲಕ ಮತ್ತು ನಿರ್ವಾಹಕ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಗಾಯಗೊಂಡವರನ್ನು ತತ್ ಕ್ಷಣ ಕೋಟ ಜೀವನ್ ಮಿತ್ರ ಹಾಗೂ ಟೋಲ್ ಆಂಬುಲೆನ್ಸ್ ನಲ್ಲಿ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಈ ಬಗ್ಗೆ ಕೋಟ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…