ವಾಯುಭಾರ ಕುಸಿತದಿಂದ ದ.ಕ.ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಕೆಲವೆಡೆ ಹಾನಿಯಾಗಿದೆ.

ಬಂಟ್ವಾಳ ತಾಲ್ಲೂಕು ಮೂಡ ನಡುಗೋಡು ಗ್ರಾಮದ ದಂಡೆ ಮಜಲು ಎಂಬಲ್ಲಿ ರಾಮಣ್ಣ ನಾಯಕ್ ಎಂಬವರ ಕಚ್ಚಾ ಮನೆ ಮಳೆಯಿಂದ ತೀವ್ರ ಹಾನಿಯಾಗಿದ್ದು ಅವರು ಸದ್ಯ ಪಕ್ಕದಲ್ಲೇ ಇರುವ ಸಹೋದರನ ಮನೆಗೆ ಸ್ಥಳಾಂತರಗೊಂಡಿದ್ದಾರೆ. 
ಅಮ್ಟಾಡಿ ಗ್ರಾಮದ ಪೆದಮಲೆ ಎಂಬಲ್ಲಿ ಬಂಟ್ವಾಳ- ಸಿದ್ದಕಟ್ಟೆ ಸಂಪರ್ಕಿಸುವ ರಾಜ್ಯ ಹೆದ್ದಾರಿ ಬದಿಯಲ್ಲಿ ಮಣ್ಣು ಕುಸಿದು ಬಿದ್ದಿರುವ ಬಗ್ಗೆ ಪಿಡಬ್ಲ್ಯೂಡಿ ಇಲಾಖೆಗೆ ಕಂದಾಯ ಅಧಿಕಾರಿಗಳು ಮಾಹಿತಿ ರವಾನೆ ಮಾಡಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸ್ಥಳ ಪರಿವೀಕ್ಷಿಸಿ ತಾತ್ಕಾಲಿಕ ಕ್ರಮ ಕೈಗೊಂಡಿದ್ದಾರೆ.



