ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಎರಡು ದಿನಗಳಿಂದ ನಿರಂತರ ಮಳೆಯಿಂದಾಗಿ ಹಲವೆಡೆ ಭಾರೀ ಹಾನಿ ಸಂಭವಿಸಿದೆ.

ಕಳೆದ ಎರಡು ದಿನಗಳಲ್ಲಿ 41 ಮಂದಿ ಸಾವನ್ನಪ್ಪಿದ್ದು, ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 36ಕ್ಕೆ ಏರಿದೆ. 20 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮತ್ತಷ್ಟು ಜನ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆಯಿದ್ದು, ರಕ್ಷಣಾ ಕಾರ್ಯ ಮುಂದುವರಿದೆ.



