ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸೌಲಭ್ಯ..!

ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಅತ್ಯಾಧುನಿಕ ರೋಬೋಟಿಕ್ ಸರ್ಜರಿ ಸೌಲಭ್ಯವನ್ನು ಆರಂಭಿಸಲಾಗಿದೆ. ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆ ಯು ಎಸ್ ಎಸ್ ಐ ಮಂತ್ರ 3.0 ರೋಬೋಟಿಕ್ ಸರ್ಜಿಕಲ್ ಸಿಸ್ಟಮ್ ಅನ್ನು ಅಳವಡಿಸಿಕೊಂಡು ರೊಬೋಟಿಕ್ ಶಸ್ತ್ರಚಿಕಿತ್ಸೆಯಲ್ಲಿ ಒಂದು ಪ್ರಮುಖ ಹೆಜ್ಜೆಯನ್ನು ದಾಖಲಿಸಿದೆ.

ಎಸ್ ಎಸ್ ಐ ಮಂತ್ರ 3.0 ಭಾರತದಲ್ಲೇ ನಿರ್ಮಿಸಲ್ಪಟ್ಟ, ಅತ್ಯಾಧುನಿಕ ತಂತ್ರಜ್ಞಾನವನ್ನು ಒಳಗೊಂಡಿರುವ ಉಪಕರಣ. ಇದರ ನಿರ್ಮಾಣ ಒಂದು ಹೆಮ್ಮೆಯ ಸಾಧನೆ ಯಾಗಿದೆ ಎಂದು ಯೆನೆಪೊಯ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ.ವಿಜಯ ಕುಮಾರ್ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದಾರೆ. ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯು ಡಾ. ವಿನ್ನಿ ಮತ್ತು ಮಂತ್ರಾ 3.0 ಎಂಬ ಎರಡು ಅತ್ಯಾಧುನಿಕ ರೋಬೋಟಿಕ್ ಶಸ್ತ್ರಚಿಕಿತ್ಸಾ ವ್ಯವಸ್ಥೆಗಳನ್ನೂ ಹೊಂದಿರುವ ದೇಶದ ಏಕೈಕ ಖಾಸಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಾಗಿದೆ.

ಸರ್ಕಾರಿ ಹಾಗೂ ಸಾಮಾಜಿಕ ಭದ್ರತಾ ಯೋಜನೆಗಳ ಮೂಲಕ ಬಡ ರೋಗಿಗಳಿಗೆ ಉಚಿತವಾಗಿ ರೋಬೋಟಿಕ್ ಶಸ್ತ್ರಚಿಕಿತ್ಸೆ ನೀಡುವ ದೇಶದ ಏಕೈಕ ಖಾಸಗಿ ಆಸ್ಪತ್ರೆಯಾಗಿ ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯು ಗುರುತಿಸಿಕೊಂಡಿದೆ ಎಂದವರು ವಿವರಿಸಿದ್ದಾರೆ. ಮೂತ್ರ ರೋಗ ಶಾಸ್ತ್ರ ಅರ್ಬುದ ಶಸ್ತ್ರಚಿಕಿತ್ಸಾ, ಸ್ತ್ರೀರೋಗ ಶಾಸ್ತ್ರ ಮತ್ತು ಸಾಮಾನ್ಯ ಶಸ್ತ್ರಚಿಕಿತ್ಸೆಯಲ್ಲಿ ಮಂತ್ರ 3.0 ಅನ್ನು ಬಳಸಿಕೊಂಡು ಸುಮಾರು 100 ಕಾರ್ಯವಿಧಾನಗಳನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ. ಮಂತ್ರಾ 2.0 ರ ಸುಧಾರಿತ ಆವೃತ್ತಿಯಾದ ಮಂತ್ರಾ 3.0, ಮುಂದಿನ ತಲೆಮಾರಿನ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಪ್ರತಿಬಿಂಬಿಸುತ್ತದೆ.

ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆ ಕರಾವಳಿ ಕರ್ನಾಟಕ ಮತ್ತು ಉತ್ತರ ಕೇರಳ ಭಾಗದಲ್ಲಿ 2016 ರಲ್ಲಿ ಡಾ ವಿನ್ಸಿ ಸರ್ಜಿಕಲ್ ಸಿಸ್ಟಮ್ ನೊಂದಿಗೆ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಪರಿಚಯಿಸಿದಂತಹ ಸಂಸ್ಥೆಯಾಗಿದೆ. ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯು ಭಾರತೀಯರಾಗಿ, ನಮ್ಮ ದೇಶದಲ್ಲೇ ರೂಪುಗೊಂಡ ಈ ವಿಶ್ವಮಟ್ಟದ ನಾವೀನ್ಯತೆಯೊಂದಿಗೆ ಜಗತ್ತಿನ ಶ್ರೇಷ್ಠ ಸಾಧನೆಗಳಿಗೆ ಸಮಾನವಾಗಿ ನಿಲ್ಲುತ್ತದೆ.

ಇದು ನಮಗೆ ಹೆಮ್ಮೆಯ ಸಂಗತಿಯಾಗಿದೆ ಎಂದೂ ಡಾ. ವಿಜಯ ಕುಮಾರ್ ಹೇಳಿದ್ದಾರೆ. ರೋಬೋಟಿಕ್ ಶಸ್ತ್ರ ಚಿಕಿತ್ಸೆಯಲ್ಲಿ ಗಾಯದ ಪ್ರಮಾಣ ಬಹಳ ಕಡಿಮೆ ಮತ್ತು ತ್ವರಿತ ಚೇತರಿಕೆ ಹಾಗು ರಕ್ತದ ನಷ್ಟವೂ ಕಡಿಮೆ ಎಂದವರು ರೊಬೋಟಿಕ್ ಶಸ್ತ್ರಚಿಕಿತ್ಸೆಯ ಪ್ರಯೋಜನಗಳನ್ನು ವಿವರಿಸಿದ್ದು, ಯೆನಪೋಯ ಡೀಮ್ಡ್ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಯೆನೆಪೋಯ ಅಬ್ದುಲ್ಲಾ ಕುಂಞ, ಸಹ ಕುಲಪತಿ ಫರ್ಹಾದ್ ಯೇನೆಪೋಯ ಅವರ ದೂರದೃಷ್ಟಿಯುತ ನಾಯಕತ್ವದ ಮಾರ್ಗದರ್ಶನದಲ್ಲಿ, ಈ ಆಸ್ಪತ್ರೆ ಸಮಾಜದ ಎಲ್ಲಾ ವರ್ಗಗಳಿಗೆ ವಿಶೇಷವಾಗಿ ಅತ್ಯಂತ ಆರ್ಥಿಕವಾಗಿ ಹಿಂದುಳಿದವರಿಗೆ – ವಿಶ್ವಮಟ್ಟದ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ನೀಡಲು ನಿರಂತರವಾಗಿ ಬದ್ಧವಾಗಿದೆ ಎಂದವರು ತಿಳಿಸಿದ್ಧಾರೆ.

ಇನ್ನು ಈ ಸಂದರ್ಭದಲ್ಲಿ ಯೆನೆಪೊಯ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಪ್ರಾಂಶುಪಾಲ ಡಾ.ಮೂಸಬ್ಬ, ಯುರೋ ಲಾಜಿ ವಿಭಾಗದ ಮುಖ್ಯಸ್ಥ ಡಾ.ಮುಜೀಬ್ ರಹ್ಮಾನ್, ಡಾ.ಜಲಾಲುದ್ದೀನ್ ಅಕ್ಬರ್, ಡಾ.ಅಲ್ತಾಫ್, ಡಾ.ಅಂಜುಮ್ ಮತ್ತು ಎಸ್‌ಎಸ್ ಐ ರೋಬೋಟಿಕ್ ಸಂಸ್ಥೆಯ ಸಿಇಒ ವಿಶ್ವ ಜ್ಯೋತಿ ಶ್ರೀವಾತ್ಸವ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!