ಜನ ಮನದ ನಾಡಿ ಮಿಡಿತ

Advertisement

24ನೇ ವರ್ಷದ ಕಾರ್ಗಿಲ್ ದಿವಸ್; ಕಾರ್ಗಿಲ್ ವೀರ ಯೋಧರು ಯಾವಾಗಲೂ ದೇಶವಾಸಿಗಳಿಗೆ ಸ್ಫೂರ್ತಿಯಾಗಿ ಉಳಿಯುತ್ತಾರೆ – ಪ್ರಧಾನಿ ಮೋದಿ

ನವದೆಹಲಿ: ಇಂದು ದೇಶವು 24 ನೇ ವರ್ಷದ ಕಾರ್ಗಿಲ್ ದಿವಸ್ ಅನ್ನು ಆಚರಿಸುತ್ತಿದೆ. 24 ವರ್ಷಗಳ ಹಿಂದೆ ಇದೇ ದಿನ, ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನವನ್ನು ಸೋಲಿಸಿದ ವೀರ ಭಾರತೀಯ ಸೈನಿಕರು ತಮ್ಮ ನಿಯಂತ್ರಣದಲ್ಲಿರುವ ಪೋಸ್ಟ್‌ಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದರು.

ಪ್ರಧಾನಿ ಮೋದಿ ಟ್ವೀಟ್ ಮಾಡಿ, “ಕಾರ್ಗಿಲ್ ವಿಜಯ್ ದಿವಸ್ ಭಾರತದ ಧೈರ್ಯಶಾಲಿಗಳ ವೀರಗಾಥೆ ಸ್ಮರಿಸುತ್ತದೆ. ಕಾರ್ಗಿಲ್ ವೀರ ಯೋಧರು ಯಾವಾಗಲೂ ದೇಶವಾಸಿಗಳಿಗೆ ಸ್ಫೂರ್ತಿಯಾಗಿ ಉಳಿಯುತ್ತಾರೆ. ವೀರಯೋಧರಿಗೆ ನಮನಗಳು, ಜೈ ಹಿಂದ್” ಎಂದು ಬರೆದಿದ್ದಾರೆ.

ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದು, “ಕಾರ್ಗಿಲ್ ವಿಜಯ್ ದಿವಸ್ ಕೋಟ್ಯಂತರ ದೇಶವಾಸಿಗಳ ವಿಜಯದ ದಿನ. ಮಾತೃಭೂಮಿಯನ್ನು ರಕ್ಷಿಸಿದ ಸಮಸ್ತ ವೀರ ಯೋಧರಿಗೆ ನಮನ ಸಲ್ಲಿಸುವ ದಿನ. ಭಾರತ ಮಾತೆಯ ವೀರ ಸೈನಿಕರು ಕಾರ್ಗಿಲ್‌ನ ದುರ್ಗಮ ಬೆಟ್ಟಗಳ ಮೇಲೆ ಹೆಮ್ಮೆಯಿಂದ ತ್ರಿವರ್ಣ ಧ್ವಜ ಹಾರಿಸುವ ಮೂಲಕ ದೇಶದ ಸಮಗ್ರತೆಯನ್ನು ಎತ್ತಿ ಹಿಡಿದ ನಿಮ್ಮ ತ್ಯಾಗಕ್ಕೆ ವಂದಿಸುತ್ತೇನೆ” ಎಂದು ಸ್ಮರಿಸಿದ್ದಾರೆ.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಲಡಾಖ್‌ನ ದ್ರಾಸ್‌ನಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಬಳಿಕ ಮಾತನಾಡಿ, “ಮಾತೃಭೂಮಿಯ ರಕ್ಷಣೆಗಾಗಿ ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿದ ವೀರಪುತ್ರರಿಗೆ ನನ್ನ ವಂದನೆಗಳು. ದೇಶವನ್ನು ಮೊದಲ ಸ್ಥಾನದಲ್ಲಿಟ್ಟು ಅದಕ್ಕಾಗಿ ಪ್ರಾಣ ತ್ಯಾಗ ಮಾಡಲು ಹಿಂಜರಿಯದ ವೀರರಿಗೆ ವಂದಿಸುತ್ತೇನೆ” ಎಂದು ತಿಳಿಸಿದ್ದಾರೆ.ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ (ಸಿಡಿಎಸ್) ಜನರಲ್ ಅನಿಲ್ ಚೌಹಾಣ್, ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ಸೇನೆಯ ಹೆಲಿಕಾಪ್ಟರ್‌ಗಳು ಸ್ಮಾರಕಗಳಿಗೆ ಆಕಾಶದಿಂದ ಹೂಮಳೆಗೈದವು.

ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿ, ನಮ್ಮ ದೇಶದ ಕೀರ್ತಿಯನ್ನು ಎಲ್ಲೆಡೆ ಪಸರಿಸಿ, ನಮ್ಮ ರಾಷ್ಟ್ರಧ್ವಜವನ್ನು ಮುಗಿಲೆತ್ತರಕ್ಕೆ ಹಾರಿಸಿದ ಪ್ರತಿಯೊಬ್ಬ ಸೈನಿಕನಿಗೆ ನಮ್ಮ ಕೋಟಿ ನಮನಗಳು.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!