ನವದೆಹಲಿ: ಇಂದು ದೇಶವು 24 ನೇ ವರ್ಷದ ಕಾರ್ಗಿಲ್ ದಿವಸ್ ಅನ್ನು ಆಚರಿಸುತ್ತಿದೆ. 24 ವರ್ಷಗಳ ಹಿಂದೆ ಇದೇ ದಿನ, ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನವನ್ನು ಸೋಲಿಸಿದ ವೀರ ಭಾರತೀಯ ಸೈನಿಕರು ತಮ್ಮ ನಿಯಂತ್ರಣದಲ್ಲಿರುವ ಪೋಸ್ಟ್‌ಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದರು.
ಪ್ರಧಾನಿ ಮೋದಿ ಟ್ವೀಟ್ ಮಾಡಿ, “ಕಾರ್ಗಿಲ್ ವಿಜಯ್ ದಿವಸ್ ಭಾರತದ ಧೈರ್ಯಶಾಲಿಗಳ ವೀರಗಾಥೆ ಸ್ಮರಿಸುತ್ತದೆ. ಕಾರ್ಗಿಲ್ ವೀರ ಯೋಧರು ಯಾವಾಗಲೂ ದೇಶವಾಸಿಗಳಿಗೆ ಸ್ಫೂರ್ತಿಯಾಗಿ ಉಳಿಯುತ್ತಾರೆ. ವೀರಯೋಧರಿಗೆ ನಮನಗಳು, ಜೈ ಹಿಂದ್” ಎಂದು ಬರೆದಿದ್ದಾರೆ.
ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದು, “ಕಾರ್ಗಿಲ್ ವಿಜಯ್ ದಿವಸ್ ಕೋಟ್ಯಂತರ ದೇಶವಾಸಿಗಳ ವಿಜಯದ ದಿನ. ಮಾತೃಭೂಮಿಯನ್ನು ರಕ್ಷಿಸಿದ ಸಮಸ್ತ ವೀರ ಯೋಧರಿಗೆ ನಮನ ಸಲ್ಲಿಸುವ ದಿನ. ಭಾರತ ಮಾತೆಯ ವೀರ ಸೈನಿಕರು ಕಾರ್ಗಿಲ್‌ನ ದುರ್ಗಮ ಬೆಟ್ಟಗಳ ಮೇಲೆ ಹೆಮ್ಮೆಯಿಂದ ತ್ರಿವರ್ಣ ಧ್ವಜ ಹಾರಿಸುವ ಮೂಲಕ ದೇಶದ ಸಮಗ್ರತೆಯನ್ನು ಎತ್ತಿ ಹಿಡಿದ ನಿಮ್ಮ ತ್ಯಾಗಕ್ಕೆ ವಂದಿಸುತ್ತೇನೆ” ಎಂದು ಸ್ಮರಿಸಿದ್ದಾರೆ.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಲಡಾಖ್‌ನ ದ್ರಾಸ್‌ನಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಬಳಿಕ ಮಾತನಾಡಿ, “ಮಾತೃಭೂಮಿಯ ರಕ್ಷಣೆಗಾಗಿ ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿದ ವೀರಪುತ್ರರಿಗೆ ನನ್ನ ವಂದನೆಗಳು. ದೇಶವನ್ನು ಮೊದಲ ಸ್ಥಾನದಲ್ಲಿಟ್ಟು ಅದಕ್ಕಾಗಿ ಪ್ರಾಣ ತ್ಯಾಗ ಮಾಡಲು ಹಿಂಜರಿಯದ ವೀರರಿಗೆ ವಂದಿಸುತ್ತೇನೆ” ಎಂದು ತಿಳಿಸಿದ್ದಾರೆ.ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ (ಸಿಡಿಎಸ್) ಜನರಲ್ ಅನಿಲ್ ಚೌಹಾಣ್, ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ಸೇನೆಯ ಹೆಲಿಕಾಪ್ಟರ್‌ಗಳು ಸ್ಮಾರಕಗಳಿಗೆ ಆಕಾಶದಿಂದ ಹೂಮಳೆಗೈದವು.
ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿ, ನಮ್ಮ ದೇಶದ ಕೀರ್ತಿಯನ್ನು ಎಲ್ಲೆಡೆ ಪಸರಿಸಿ, ನಮ್ಮ ರಾಷ್ಟ್ರಧ್ವಜವನ್ನು ಮುಗಿಲೆತ್ತರಕ್ಕೆ ಹಾರಿಸಿದ ಪ್ರತಿಯೊಬ್ಬ ಸೈನಿಕನಿಗೆ ನಮ್ಮ ಕೋಟಿ ನಮನಗಳು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…