ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆಯಲ್ಲಿ ಕಾಲೇಜು ವಿದ್ಯಾರ್ಥಿಗೆ ಮಾದಕವಸ್ತು ಪೂರೈಸುತ್ತಿದ್ದ ಆರೋಪಿ ಸೆರೆಯಾಗಿದ್ದಾನೆ.

ಮಂಗಳೂರಿನ ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಆರೋಪದಲ್ಲಿ ಓರ್ವನನ್ನು ಬಂಧಿಸಿದ್ದಾರೆ. ಈತ ಮೂಲತ: ಕೇರಳದ ಎರ್ನಾಕುಲಂ ಮಟ್ಟಂಚೇರಿಯನವನು ಆಗಿದ್ದು ಇದೀಗ ದೇರಳಕಟ್ಟೆಯಲ್ಲಿ ನೆಲೆಸಿರುವ ಮುಹಮ್ಮದ್ ಅರ್ಶದ್ ಖಾನ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತನಿಂದ ರೂ. 10,85,000 ಮೌಲ್ಯದ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ. ಗಾಂಜಾ, ಎಂಡಿಎಂಎ ಮಾತ್ರೆ ಮತ್ತು ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್ ಸಹಿತ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.



