ಬಂಟ್ವಾಳ ಪುರಸಭಾ ವ್ಯಾಪ್ತಿಯ ಜನನಿಬಿಡ ಪ್ರದೇಶಗಳಲ್ಲಿ ಬೀದಿ ನಾಯಿಗಳ ಕಾಟ ಶುರುವಾಗಿದ್ದು, ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ನಡೆದಾಡಲು ಅಸಾಧ್ಯವಾಗಿದೆ ಎಂಬ ದೂರುಗಳು ಕೇಳಿ ಬಂದಿವೆ.
ಜನರು ಓಡಾಡುವ ಸ್ಥಳಗಳಲ್ಲಿ ಬೀದಿ ನಾಯಿಗಳ ಉಪಟಳ ತಾಳಲಾರದೆ ಜನ ರೋಸಿಹೋಗಿದ್ದಾರೆ. ಕೈಕುಂಜೆ ರಸ್ತೆಯಲ್ಲಿ ಸಂಜೆ ವೇಳೆ ಶಾಲೆಯಿಂದ ನಡೆದುಕೊಂಡು ಬರುವ ವಿದ್ಯಾರ್ಥಿಗಳಿಗೆ ನಾಯಿಗಳು ಕಾಟ ನೀಡುತ್ತಿವೆ ಎಂಬ ದೂರುಗಳು ಕೇಳಿಬಂದಿವೆ. ಇದರ ಜೊತೆಗೆ ಕೆ.ಎಸ್.ಆರ್.ಟಿ.ಬಸ್ ನಿಲ್ದಾಣ ಒಳಗೆ ನಾಯಿಗಳ ದಂಡು ಮಲಗಿರುವುದಲ್ಲದೆ, ಇಲ್ಲಿ ಬಸ್ ಕಾಯಲು ಬರುವವರಿಗೆ ಹೆದರಿಕೆಯಾಗುತ್ತಿರುವ ಬಗ್ಗೆ ವರದಿಯಾಗಿದೆ. ರಸ್ತೆಯ ಬದಿಯಲ್ಲಿ ಬಿಸಾಡುವ ತ್ಯಾಜ್ಯದ ರಾಶಿಗಳನ್ನು ನಡುರಸ್ತೆಗೆ ಎಳೆದು ತಂದು ರಸ್ತೆತುಂಬಾ ಗಲೀಜು ಮಾಡುವ ದೃಶ್ಯಗಳು ಕೂಡ ಬಂಟ್ವಾಳದ ಕೆಲವು ಕಡೆಗಳಲ್ಲಿ ಕಂಡುಬಂದಿದೆ ಎನ್ನಲಾಗಿದೆ. ಬೀದಿ ನಾಯಿಗಳ ತೊಂದರೆಯಿಂದ ರೇಬಿಸ್ ರೋಗದ ಭಯ ಕೂಡ ಅವರಿಸಿದ್ದು, ಪುರಸಭೆ ಇದರ ಬಗ್ಗೆ ಸೂಕ್ತವಾದ ಕ್ರಮ ಕೈಗೊಳ್ಳಲು ಇಲ್ಲಿನ ಪುರಸಭಾ ನಿವಾಸಿಗಳು ಮನವಿ ಮಾಡಿದ್ದಾರೆ. ಈ ಬಗ್ಗೆ ಕಳೆದ ಪುರಸಭಾ ಮೀಟಿಂಗ್ ನಲ್ಲಿ ದೊಡ್ಡದಾದ ಚರ್ಚೆ ನಡೆದಿದ್ದು, ಸಂತಾನಹರಣ ಚಿಕಿತ್ಸೆ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು. ಅದರ ಜೊತೆ ಇತ್ತೀಚಿಗೆ ನಡೆದ ಕೆ.ಡಿ.ಪಿ.ಸಭೆಯಲ್ಲಿ ಕೂಡ ಬೀದಿನಾಯಿಗಳ ಕಡಿವಾಣದ ಕ್ರಮದ ಬಗ್ಗೆ ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅದರೂ ಸ್ಥಳೀಯ ಆಡಳಿತದಿಂದ ಹಾಗೂ ತಾಲೂಕು ಪಂಚಾಯತ್ ಈ ಬಗ್ಗೆ ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ ಎಂಬ ಆರೋಪಗಳು ಇದೀಗ ಕೇಳಿ ಬಂದಿದ್ದು, ಸಾರ್ವಜನಿಕ ವಲಯದಲ್ಲಿ ಚರ್ಚಿತ ವಿಷಯವಾಗಿದೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…