ಜಯ ಸುವರ್ಣ ಸಂಸ್ಮರಣೆಯ ಅಂಗವಾಗಿ ಜಯ ಸುವರ್ಣ ಜನಸೇವಾ ಪುರಸ್ಕಾರ ಶಿವಗಿರಿ ಸಮ್ಮಾನ್ ಪ್ರಶಸ್ತಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಸೆಪ್ಟಂಬರ್ 7 ರಂದು ಭಾನುವಾರ ಮುಂಬಯಿಯ ಜಯಲೀಲಾ ಬ್ಯಾಂಕ್ವೆಟ್ ಹಾಲ್ ಗೋರೆಗಾಂವ್ ಪೂರ್ವ ಇಲ್ಲಿ ಜಯ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು ಆಯೋಜಿಸಿರುವ 171 ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯ ಸಮಾರಂಭದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಐಕಳ ಹರೀಶ್ ಶೆಟ್ಟಿ ಅವರನ್ನು ಸನ್ಮಾನಿಸಲಾಗುತ್ತದೆ. ಐಕಳ ಹರೀಶ್ ಶೆಟ್ಟಿ ಅವರು ವಿಶ್ವಮಟ್ಟದಲ್ಲಿ ಸಮಾಜಸೇವೆಯ ಮೂಲಕ ಗುರುತಿಸಿಕೊಂಡವರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಜೊತೆಗೆ ನೂರಕ್ಕೂ ಮಿಕ್ಕಿದ ಸನ್ಮಾನ, ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿರುವ ಐಕಳ ಅವರ ಸಮಾಜ ಸೇವೆ, ಸಂಘಟನಾ ಚತುರತೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…