ಸರಕಾರದಿಂದ ಸಿಗುವ ಸವಲತ್ತುಗಳು ನೇರವಾಗಿ ರೈತರಿಗೆ ಸಿಗುವಂತೆ ಮಾಡಲು ಕೃಷಿಕ ಸಮಾಜ ಸೇತುವೆಯಾಗಿ ಕೆಲಸ ಮಾಡಿದರೆ ಕೃಷಿಕರ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಅವರು ಹೇಳಿದ್ದಾರೆ.
ಅವರು ಬಿಸಿರೋಡಿನಲ್ಲಿ ತಾಲೂಕು ಕೃಷಿಕ ಸಮಾಜ ಬಂಟ್ವಾಳ ಇದರ ನೂತನವಾಗಿ ನಿರ್ಮಾಣಗೊಂಡಿರುವ ಕೃಷಿಕ ಸಮಾಜ ಭವನದ ಉದ್ಘಾಟನಾ ಸಮಾರಂಭದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ್ದಾರೆ. ಕೃಷಿಕರ ಕೊಂಡಿಯಾಗಿದ್ದುಕೊಂಡು ಸಮಸ್ಯೆಗಳ ಪರಿಹಾರಕ್ಕೆ ಸದಾ ಸ್ಪಂದಿಸುವ ಕಾರ್ಯ ಕೃಷಿ ಸಮಾಜದಿಂದ ಆಗಲಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದ್ದು, ಕೃಷಿಕ ಸಮಾಜ ಭವನವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದ್ದಾರೆ.
ಬಳಿಕ ಮಾತನಾಡಿದ ಅವರು, ದ.ಕ.ಜಿಲ್ಲೆಯ ಕೃಷಿಕರು ಬುಧ್ಧಿವಂತರಿದ್ದು, ಭತ್ತದ ಕೃಷಿಯ ಜೊತೆ ಲಾಭದಾಯಕ ತೋಟಗಾರಿಕೆಯೆ ಬೆಲೆಗಳಿಗೆ ಅವಲಂಭಿತರಾಗಿದ್ದಾರೆ ಎಂದು ಅವರು ಹೇಳಿದ್ಧಾರೆ. ಪುರಸಭಾ ಅಧ್ಯಕ್ಷ ವಾಸು ಪೂಜಾರಿ, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಬೂಡ ಅಧ್ಯಕ್ಷ ಬೇಬಿ ಕುಂದರ್, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…