ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನಾಭರಣ ಕಳವು; ಐದು ಮಂದಿ ಪೊಲೀಸರ ವಶ..!

ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ರವಿರಾಜ್, ಸದಾನಂದ, ಪ್ರವೀಣ್ ಫೆರ್ನಾಂಡೀಸ್, ರಾಜೇಶ್, ನಿತಿನ್ ಬಂಧಿತರು. ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ತೆರೆದು ಬೆಲೆಬಾಳುವ ಚಿನ್ನಾಭರಣ ಕಳವುಗೈದಿರುವ ಆರೋಪದಲ್ಲಿ ಈ ಐದು ಮಂದಿಯನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇವರು ವಿಮಾನ ನಿಲ್ದಾಣದಲ್ಲಿ ಲಗೇಜ್ ಲೋಡ್ – ಅನ್ ಲೋಡ್ ಮಾಡುತ್ತಿದ್ದವರು ಎಂದು ತಿಳಿದು ಬಂದಿದೆ. ಸಿಆರ್‌ಪಿಎಫ್ ಜವಾನ ಹರಿಕೇಶ್ ಎಂಬವರ ಪತ್ನಿ ರಾಜೇಶ್ವರಿ ಪದ್ಮಶಾಲಿ ಅವರು ಸಂಬಂಧಿಕರ ಮದುವೆಗಾಗಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಗಳೂರಿನಿಂದ ಹೊರಟು ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ವಿಮಾನ ನಿಲ್ದಾಣದ ಹೊರಗೆ ಬಂದಾಗ ಅವರಿಗೆ ಲಗೇಜ್ ಟ್ರಾಲಿ ಬ್ಯಾಗ್ ನ ಲಾಕ್ ತೆರದಿರುವುದು ಗಮನಕ್ಕೆ ಬಂದಿತ್ತು. ತಕ್ಷಣ ಬ್ಯಾಗ್ ಪರಿಶೀಲಿಸಿದಾಗ 56 ಗ್ರಾಂ ತೂಕದ ಸುಮಾರು 4.5 ಲಕ್ಷ ರೂ. ಮೌಲ್ಯದ ಚಿನ್ನದ ನೆಕ್ಲೇಸ್ ಕಳವಾಗಿರುವುದು ಗೊತ್ತಾಗಿದೆ. ಈ ಸಂಬಂಧ ಅವರು ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಮಂಗಳೂರು ವಿಮಾನ ನಿಲ್ದಾಣದಲ್ಲಿನ ಲೋಡ್ – ಅನ್ ಲೋಡ್ ಮಾಡುವ ಕೆಲಸ ಮಾಡುತ್ತಿದ್ದ ನಾಲ್ಕು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಈ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿರುವ ಮಾಹಿತಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!