ಮೂವರು ಮುಸುಕುದಾರಿ ಕಳ್ಳರು ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಘಟನೆ ಉಡುಪಿಯ ಕುಕ್ಕಿಕಟ್ಟೆಯ ಕಲ್ಯಾಣನಗರದಲ್ಲಿ ನಡೆದಿದೆ.

ಮೂವರು ಮುಸುಕುದಾರಿ ಕಳ್ಳರು ಕುಕ್ಕಿಕಟ್ಟೆ ಭಾಗದಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು. ಮೂವರ ತಂಡವು ಕಲ್ಯಾಣನಗರದ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದೆ. ಈ ವೇಳೆ ಇನ್ನೊಂದು ಮನೆಯವರು ಎಚ್ಚರಗೊಳ್ಳುತ್ತಿದ್ದಂತೆ ಕಳ್ಳರು ಸ್ಥಳದಿಂದ ಪರಾರಿಯಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದು, ಈ ಕಳ್ಳರ ತಂಡ ಬೇರೆ ಕಡೆಯೂ ಕಳ್ಳತನ ಮಾಡಿರುವ ಶಂಕೆ ವ್ಯಕ್ತ ಪಡಿಸಿದ್ದಾರೆ.



