ಅಪಾರ್ಟ್ ಮೆಂಟ್‌ವೊಂದರ ಫ್ಲ್ಯಾಟ್‌ನ ವಾಷಿಂಗ್ ಮೆಶಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡ ಘಟನೆ ಮಣಿಪಾಲದಲ್ಲಿ ಸಂಭವಿಸಿದೆ.

ಮಣಿಪಾಲ ಡಿಸಿ ಆಫೀಸ್ ರಸ್ತೆಯಲ್ಲಿರುವ ಅದಿತಿ ಪರ್ವ ಅಪಾರ್ಟ್ ಮೆಂಟ್ ನಲ್ಲಿ ಈ ಅವಘಡ ನಡೆದಿದ್ದು, ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿ ನಂದಿಸಿ, ಫ್ಲ್ಯಾಟ್ ನಲ್ಲಿ ಸಿಲುಕಿದ್ದ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.

ಘಟನೆಯಿಂದ ಅಂದಾಜು 50 ಸಾವಿರ ರೂ. ನಷ್ಟ ಸಂಭವಿಸಿದೆ.



