ನಗರ ಪ್ರದೇಶದ ಬಡ ಜನರ ಆರೋಗ್ಯ ಸಂಜೀವಿನಿಯಾಗಿ “ನಮ್ಮ ಕ್ಲಿನಿಕ್” ಸೇವೆ ನೀಡಲಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದ್ದಾರೆ.

ಅವರು ಬಂಟ್ವಾಳ ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟು ಎಂಬಲ್ಲಿ ಖಾಸಗಿ ಕಟ್ಟಡವೊಂದರಲ್ಲಿ ಆರಂಭಗೊಂಡ “ನಮ್ಮ ಕ್ಲಿನಿಕ್” ಉದ್ಘಾಟಿಸಿ ಮಾತನಾಡಿದರು. ಪುರಸಭಾ ಸದಸ್ಯರು ಅವರ ವಾರ್ಡ್ ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಂಡು ಪ್ರಾಥಮಿಕ ಹಂತದಲ್ಲಿ ರೋಗದ ಲಕ್ಷಣಗಳನ್ನು ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಕ್ಲಿನಿಕ್ ಮುಖಾಂತರ ನೆರವಾಗಬೇಕು.

40 ವರ್ಷದ ದಾಟಿದ ಪ್ರತಿಯೊಬ್ಬರೂ ಕೂಡ ಎರಡು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಕೊಂಡರೆ ಉತ್ತಮ. ಆರೋಗ್ಯದ ರಕ್ಷಣೆಯ ಬಗ್ಗೆ ಉದಾಸೀನ ಮನೋಭಾವ ಬೇಡ. ಎಂಧು ಹೇಳಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಬಂಟ್ವಾಳ ಪುರಸಭಾ ಅಧ್ಯಕ್ಷ ವಾಸು ಪೂಜಾರಿ, ಸದಸ್ಯರಾದ ಪುರುಷೋತ್ತಮ, ಮೀನಾಕ್ಷಿ ಗೌಡ, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.



