ದ.ಕ.ಜಿಲ್ಲಾ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್ ಕೋಸ್ತಾ ಎಂ. ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಚ್.ವಿ.ರಾಘವೇಂದ್ರ ಅವರ ಅಧ್ಯಕ್ಷತೆಯ ಸಭೆಯಲ್ಲಿ ಆಯ್ಕೆ ಮಾಡಲಾಗಿದ್ದು. ಒಟ್ಟು ಆರು ತಾಲೂಕಿನ ವಕೀಲರ ಸಂಘದ ಪದಾಧಿಕಾರಿಗಳ ಸಮಾಲೋಚನೆ ಸಭೆಯಲ್ಲಿ ದ.ಕ.ಜಿಲ್ಲಾ ಅಸೋಸಿಯೇಷನ್ ಇದರ ರಚನೆಯ ಬಗ್ಗೆ ಚರ್ಚೆಯಾಗಿ ಒಮ್ಮತದ ಅಭಿಪ್ರಾಯ ಪಡೆದುಕೊಂಡ ಬಳಿಕ ನೂತನ ಸಂಘದ ಪದಾಧಿಕಾರಿಗಳ ನೇಮಕ ಮಾಡಲಾಗಿದ್ದು. ದ.ಕ.ಜಿಲ್ಲಾ ಬಾರ್ ಅಸೋಸಿಯೇಷನ್ ಮೂಲಕ ಜಿಲ್ಲೆಯ ವಕೀಲರ ಬೇಕು ಬೇಡಗಳಿಗೆ ಸ್ಪಂದಿಸುವುದು ಹಾಗೂ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ಮಾಡುವ ಉದ್ದೇಶದಿಂದ ರಚನೆ ಮಾಡುವುದರ ಬಗ್ಗೆ ಸಭೆ ನಿರ್ಣಯ ಮಾಡಿಕೊಂಡಿದೆ.



