ಜನ ಮನದ ನಾಡಿ ಮಿಡಿತ

Advertisement

ಉಡುಪಿ: ವ್ಯಕ್ತಿಯೋರ್ವರಿಗೆ ಆನ್ ಲೈನ್ ಟ್ರೇಡಿಂಗ್ ಮೋಸ: ನಾಲ್ವರು ಆರೋಪಿಗಳ ಬಂಧನ

ವ್ಯಕ್ತಿಯೋರ್ವರಿಗೆ ಆನ್ ಲೈನ್ ಟ್ರೇಡಿಂಗ್ ಮೂಲಕ ಮೋಸ ಮಾಡಿದ್ದ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ಸೆನ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಸುರತ್ಕಲ್ ಕೋಡಿಕೆರೆ ನಿವಾಸಿ ಮೊಹಮದ್ ಕೈಸ್(20), ಹೆಜಮಾಡಿ ಕನ್ನಂಗಾರ್ ನಿವಾಸಿ ಅಹಮದ್ ಅನ್ವೀಜ್(20), ಬಂಟ್ವಾಳ ನಿವಾಸಿ ಸಪ್ವಾನ್(30), ಮತ್ತು ತಾಸೀರ್ (31) ಎಂದು ಗುರುತಿಸಲಾಗಿದೆ. ಕಾಪು ಶಂಕರಪುರ ನಿವಾಸಿ ಜೊಸ್ಸಿ ರವೀಂದ್ರ ಡಿಕ್ರೂಸ್(54) ಎಂಬವರಿಗೆ ಫೇಸ್ ಬುಕ್ ಮೂಲಕ ಆರೋಪಿ ಅಗರ್ವಾಲ್ ಎಂಬ ಮಹಿಳೆಯ ಪರಿಚಯವಾಗಿತ್ತು. 2025ರ ಫೆಬ್ರವರಿ ತಿಂಗಳಲ್ಲಿ ಅವಳ ವಾಟ್ಸಾಪ್ ನಂಬರನ್ನು ನೀಡಿ ಎಫ್‌ಎಕ್ಸ್ಸಿಎಮ್ ಗೋಲ್ಡ್ ಟ್ರೇಡಿಂಗ್ ಗೆ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಬರುತ್ತದೆ ಎಂದು ಮೆಸೇಜ್ ಮಾಡಿದ್ದು, ಅದನ್ನು ನಂಬಿದ ಜೊಸ್ಸಿ ತಮ್ಮ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ಒಟ್ಟು 75,00,000/- ರೂಪಾಯಿ ಹಣವನ್ನು ವರ್ಗಾವಣೆ ಮಾಡಿರುತ್ತಾರೆ. ಈ ಬಗ್ಗೆ ಜೊಸ್ಸಿ ರವೀಂದ್ರ ಡಿಕ್ರೂಸ್ ಅವರು ನೀಡಿದ ದೂರಿನಂತೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಗೆ ಇಳಿದ ಪೊಲೀಸರ ವಿಶೇಷ ತಂಡವು ಆರೋಪಿಗಳನ್ನು ಬಂಧಿಸಿ ಅವರಿಂದ ಮೊಬೈಲ್ ಪೋನ್ ಗಳನ್ನು ಹಾಗೂ ಆರೋಪಿಗಳಿಂದ ರೂ 4,00,000/- ನಗದನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಸದ್ರಿ ಪ್ರಕರಣದ ಇತರ ಆರೋಪಿಗಳು ತಲೆಮರೆಸಿ ಕೊಂಡಿದ್ದು, ಅವರ ಬಂಧನಕ್ಕೆ ಬಲೆ ಬೀಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!