ಪುತ್ತೂರಿನ ಪಿಲಿ ಪರಂಪರೆಗೆ ತನ್ನದೇ ಶೈಲಿಯ ಹೆಜ್ಜೆಯ ಹೆಗ್ಗುರುತಿನ ಬ್ರಾಂಡ್ ತಂದುಕೊಟ್ಟ ಪಿಲಿ ರಾಧಣ್ಣ ಇಂದು ಮುಂಜಾನೆ ನಸುಕಿನ ಜಾವ ನಿಧನರಾದರು.
ಕೆಮ್ಮಾಯಿ ನಿವಾಸಿ ರಾಧಾಕೃಷ್ಣ ಶೆಟ್ಟಿ(59ವ) ಅವರು ಅನಾರೋಗ್ಯದಿಂದಾಗಿ ಸೆ.5 ರಂದು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಇಂದು ಮುಂಜಾನೆ ನಸುಕಿನ ಜಾವ ನಿಧನರಾದರು. ಹತ್ತೂರಿನಲ್ಲಿ ಪಿಲಿ ರಾಧಣ್ಣ ಎಂದೇ ಹೆಸರಾದ ರಾಧಾಕೃಷ್ಣ ಶೆಟ್ಟಿಯವರು ಹುಲಿ ಆಚರಣೆಯ ಸಂಪ್ರದಾಯಕ್ಕೆ ಎಳ್ಳಷ್ಟು ಚ್ಯುತಿ ಬಾರದ ಹಾಗೆ ವೇಷ ಹಾಕುವುದು ಮತ್ತು ಕುಣಿಯುವುದು ಅವರ ವಿಶೇಷವಾಗಿತ್ತು.
65 ವರ್ಷಗಳ ಹಿಂದೆ ಪುತ್ತೂರಿನಲ್ಲಿ ಇದದ್ದು ಎರಡು ಪಿಲಿ. ಒಂದು ಪಿಲಿ ಸಂಕಪ್ಪಣ್ಣ, ಇನ್ನೊಂದು ಪಿಲಿ ಗಂಗಣ್ಣ. ಪಿಲಿ ಸಂಕಪ್ಪ ಶೆಟ್ಟಿ ಅವರ ಪುತ್ರನೇ ಪಿಲಿ ರಾಧಣ್ಣ. ಸಂಕಪ್ಪ ಅವರು ಸುಮಾರು 30 ವರ್ಷಗಳ ಕಾಲ ಕುಣಿದವರು. ರಾಧಾಕೃಷ್ಣ ಶೆಟ್ಟಿ ಅವರಿಗೆ 9 ವರ್ಷ (4ನೇ ತರಗತಿ) ಇರುವಾಗ ತಂದೆ ಸಂಕಪ್ಪ ಅವರು ಕಿನ್ನಿಪಿಲಿ ವೇಷಧಾರಿಯಾಗಿ ಸೇರಿಸಿಕೊಂಡರು. ಅಲ್ಲಿಂದ ಪಿಲಿ ವೇಷ ಶುರುವಾಗಿ ಅಪ್ಪ-ಮಗ ಇಬ್ಬರು 10 ವರ್ಷಗಳ ಕಾಲ ಜತೆ ಜತೆಯಾಗಿ ಹೆಜ್ಜೆ ಹಾಕಿದರು.
ಕಿನ್ನಿ ಪಿಲಿಯಾಗಿ ಟೋಪಿ ಹಾಕಿಕೊಂಡು ಹೊರಟ ಪುಟ್ಟ ಬಾಲಕ ಮುಂದೆ ಪಿಲಿ ರಾಧಣ್ಣ ಆಗಿ ಗುರುತಿಸಿಕೊಂಡರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗು ಪುತ್ರಿಯನ್ನು ಅಗಲಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…