ಪ್ರಕರಣ ಒಂದರಲ್ಲಿ ಆರೋಪಿಯಾಗಿದ್ದ ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ದುಬೈನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯು ಮಂಗಳೂರಿಗೆ ಬರುತ್ತಿದ್ದಂತೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬಂಧಿತನನ್ನು ವಿಶಾಲ್ ಕುಮಾರ್ ಎಂದು ಗುರುತಿಸಲಾಗಿದೆ. ಆರೋಪಿ ಮೇಲೆ 2016ರಲ್ಲಿ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಆರೋಪಿ ನ್ಯಾಯಾಲಯಕ್ಕೆ 2022 ರಿಂದ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನ ಮೇಲೆ ಮಾನ್ಯ ನ್ಯಾಯಾಲಯವು ದಸ್ತಗಿರಿ ವಾರೆಂಟ್ ಹೊರಡಿಸಲಾಗಿತ್ತು, ಇವನು ದುಬೈಗೆ ಹೋಗಿರುವ ಖಚಿತ ಮಾಹಿತಿ ಮೇರೆಗೆ ಇತನ ಮೇಲೆ ಎಲ್.ಓ.ಸಿ ಹೊರಡಿಸಲಾಗಿತ್ತು. ಇವನು ಸೆಪ್ಟೆಂಬರ್ 4 ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದು ಇವನನ್ನು ಬ್ಯೂರೋ ಆಫ್ ಇಮಿಗ್ರೇಷನ್ ರವರು ವಶಕ್ಕೆ ಪಡೆದು ಮುಂದಿನ ಕ್ರಮದ ಬಗ್ಗೆ ಕಾವೂರು ಪೊಲೀಸ್ ಠಾಣೆಗೆ ಒಪ್ಪಿಸಿದ್ದು ಆರೋಪಿಯನ್ನು ಇಂದು ಮಾನ್ಯ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗೆ ಮಾನ್ಯ ನ್ಯಾಯಾಲಯವು ಸೆಪ್ಟೆಂಬರ್ 18 ರವರೆಗೆ ನ್ಯಾಯಾಂಗ ಬಂದನಕ್ಕೆ ಒಪ್ಪಿಸಲಾಗಿರುತ್ತದೆ. ಈತನು ಸುಮಾರು 3 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದುದರಿಂದ ಈತನ ಮೇಲೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು. ಈತನ ಮೇಲೆ ಬರ್ಕೆ ಪೊಲೀಸ್ ಠಾಣೆಯಲ್ಲಿಯೂ ಕೂಡ ಪ್ರಕರಣವಿದೆ ಎಂದು ತಿಳಿದುಬಂದಿದೆ.



