ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಅಕ್ರಮ ಗೋ ಸಾಗಾಟದ ವೇಳೆ ಪೊಲೀಸರ ಹತ್ಯೆಗೆ ಯತ್ನ; ಇಬ್ಬರು ಆರೋಪಿಗಳ ಬಂಧನ

ಅಕ್ರಮ ಗೋ ಸಾಗಾಟದ ವೇಳೆ ಪೊಲೀಸರ ಮೇಲೆ ಕಾರು ಹತ್ತಿಸಿ ಹತ್ಯೆಗೆ ಯತ್ನಿಸಿದ ಇಬ್ಬರು ಖತಾರ್ನಕ್ ಆರೋಪಿಗಳನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ.

ಮಹಮ್ಮದ್ ಅಜಿಮ್ ಕಾಪು ಮತ್ತು ಮಹಮ್ಮದ್ ರಾಜಿಕ್ ಬಜಪೆ ಬಂಧಿತ ಆರೋಪಿಗಳು. ಗಂಗೊಳ್ಳಿ ಪೊಲೀಸ್ ಠಾಣಾ ಪಿಎಸ್‌ಐ ಹಾಗೂ ಸಿಬ್ಬಂದಿ ಅಲ್ಲಿನ ದನ ಕಳವು ಪ್ರಕರಣ ಒಂದರಲ್ಲಿ ಆರೋಪಿಗಳ ಪತ್ತೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಟೋಲ್ ಗೇಟ್ ಬಳಿ ಕಾಯುತ್ತಿದ್ದರು. ಈ ವೇಳೆ ಫಾರ್ಚುನರ್ ಕಾರು ಬಂದಿದ್ದು, ಅದರಲ್ಲಿ ಐದಾರು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿ ಹಾಕಲಾಗಿತ್ತು. ಕಾರಿನ ಚಾಲಕನ ಬಳಿ ಪೊಲೀಸರು ಈ ಬಗ್ಗೆ ವಿಚಾರಿಸಿದಾಗ, ಆರೋಪಿಗಳು ನಮ್ಮನ್ನು ಹುಡುಕಿಕೊಂಡು ಇಲ್ಲಿಯವರೆಗೆ ಬರುತ್ತೀರಾ? ಎಂದು ಕೇಳಿ ಪೊಲೀಸರ ಮೇಲೆ ಕಾರನ್ನು ಚಲಾಯಿಸಿ ಕೊಲೆಗೆ ಪ್ರಯತ್ನಿಸಿದ್ದಾರೆ. ಬಳಿಕ ಪೊಲೀಸರು ಕಾರಿನಲ್ಲಿದ್ದ ಶಾರೋಜ್ ಸುರತ್ಕಲ್ ಎಂಬಾತನನ್ನು ವಶಕ್ಕೆ ಪಡೆದಿದ್ದು, ಉಳಿದ ಆರೋಪಿಗಳು ಪೊಲೀಸ್ ಸಿಬ್ಬಂದಿಗಳ ಮೇಲೆ ಕಾರನ್ನು ಚಲಾಯಿಸಿ ಗಾಯಗೊಳಿಸಿ ಪರಾರಿಯಾಗಿದ್ದಾರೆ. ಆರೋಪಿಗಳಾದ ಮಹಮ್ಮದ್ ಅಜಿಮ್ ಕಾಪು ಮತ್ತು ಮಹಮ್ಮದ್ ರಾಜಿಕ್ ಬಜಪೆ ಎಂಬವರನ್ನು ಇಂದು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!