ಅಕ್ರಮ ಗೋ ಸಾಗಾಟದ ವೇಳೆ ಪೊಲೀಸರ ಮೇಲೆ ಕಾರು ಹತ್ತಿಸಿ ಹತ್ಯೆಗೆ ಯತ್ನಿಸಿದ ಇಬ್ಬರು ಖತಾರ್ನಕ್ ಆರೋಪಿಗಳನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ.
ಮಹಮ್ಮದ್ ಅಜಿಮ್ ಕಾಪು ಮತ್ತು ಮಹಮ್ಮದ್ ರಾಜಿಕ್ ಬಜಪೆ ಬಂಧಿತ ಆರೋಪಿಗಳು. ಗಂಗೊಳ್ಳಿ ಪೊಲೀಸ್ ಠಾಣಾ ಪಿಎಸ್‌ಐ ಹಾಗೂ ಸಿಬ್ಬಂದಿ ಅಲ್ಲಿನ ದನ ಕಳವು ಪ್ರಕರಣ ಒಂದರಲ್ಲಿ ಆರೋಪಿಗಳ ಪತ್ತೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಟೋಲ್ ಗೇಟ್ ಬಳಿ ಕಾಯುತ್ತಿದ್ದರು. ಈ ವೇಳೆ ಫಾರ್ಚುನರ್ ಕಾರು ಬಂದಿದ್ದು, ಅದರಲ್ಲಿ ಐದಾರು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿ ಹಾಕಲಾಗಿತ್ತು. ಕಾರಿನ ಚಾಲಕನ ಬಳಿ ಪೊಲೀಸರು ಈ ಬಗ್ಗೆ ವಿಚಾರಿಸಿದಾಗ, ಆರೋಪಿಗಳು ನಮ್ಮನ್ನು ಹುಡುಕಿಕೊಂಡು ಇಲ್ಲಿಯವರೆಗೆ ಬರುತ್ತೀರಾ? ಎಂದು ಕೇಳಿ ಪೊಲೀಸರ ಮೇಲೆ ಕಾರನ್ನು ಚಲಾಯಿಸಿ ಕೊಲೆಗೆ ಪ್ರಯತ್ನಿಸಿದ್ದಾರೆ. ಬಳಿಕ ಪೊಲೀಸರು ಕಾರಿನಲ್ಲಿದ್ದ ಶಾರೋಜ್ ಸುರತ್ಕಲ್ ಎಂಬಾತನನ್ನು ವಶಕ್ಕೆ ಪಡೆದಿದ್ದು, ಉಳಿದ ಆರೋಪಿಗಳು ಪೊಲೀಸ್ ಸಿಬ್ಬಂದಿಗಳ ಮೇಲೆ ಕಾರನ್ನು ಚಲಾಯಿಸಿ ಗಾಯಗೊಳಿಸಿ ಪರಾರಿಯಾಗಿದ್ದಾರೆ. ಆರೋಪಿಗಳಾದ ಮಹಮ್ಮದ್ ಅಜಿಮ್ ಕಾಪು ಮತ್ತು ಮಹಮ್ಮದ್ ರಾಜಿಕ್ ಬಜಪೆ ಎಂಬವರನ್ನು ಇಂದು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…