ಬಂಟ್ವಾಳ ತಹಶಿಲ್ದಾರ್ ಆಗಿದ್ದ ಅರ್ಚನಾ ಭಟ್ ಅವರು ವರ್ಗಾವಣೆಗೊಂಡ ಬಳಿಕ ತೆರವಾದ ಬಂಟ್ವಾಳ ತಹಶಿಲ್ದಾರ್ ಹುದ್ದೆಗೆ ಕನಕಪುರ ತಾಲೂಕಿನಲ್ಲಿ ತಹಶಿಲ್ದಾರ್ ಅಗಿ ಕರ್ತವ್ಯದಲ್ಲಿದ್ದ ಮಂಜುನಾಥ್ ಅವರನ್ನು ಬಂಟ್ವಾಳಕ್ಕೆ ವರ್ಗಾವಣೆಗೊಳಿಸಿ ಸರಕಾರ ಅದೇಶ ಹೊರಡಿಸಿ ತಿಂಗಳ ಬಳಿಕ ಅಧಿಕೃತವಾಗಿ ಚಾರ್ಜ್ ತೆಗೆದುಕೊಂಡಿದ್ದಾರೆ.
2015 ರಲ್ಲಿ ವಿರಾಜಪೇಟೆ ತಾಲೂಕಿನ ಕಂದಾಯ ಇಲಾಖೆಯಲ್ಲಿ ಗ್ರೇಡ್ 3 ತಹಶಿಲ್ದಾರ್ ಆಗಿ ನೇಮಕಗೊಂಡ ಬಳಿಕ ಬೆಂಗಳೂರು ಸೌತ್, ಚನ್ನರಾಯಪಟ್ಟಣ, ತುಮಕೂರು ತಾಲೂಕಿನಲ್ಲಿ ಗ್ರೇಡ್ 2 ತಹಶಿಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. ಅ ಬಳಿಕ ಮೆಟ್ರೋ, ಬೆಂಗಳೂರು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾ ಅಧಿಕಾರಿಯಾಗಿ ಕರ್ತವ್ಯದ ಬಳಿಕ ಸುಳ್ಯದಲ್ಲಿ ತಹಶಿಲ್ದಾರ್ ಆಗಿದ್ದು ಕನಕಪುರಕ್ಕೆ ವರ್ಗಾವಣೆಯಾಗಿದ್ದರು. ಇದೀಗ ಕನಕಪುರದಿಂದ ಬಂಟ್ವಾಳಕ್ಕೆ ತಹಶಿಲ್ದಾರ್ ಆಗಿ ವರ್ಗಾವಣೆಗೊಂಡಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…