ಬೈಕ್‌ವೊಂದು ಸ್ಕಿಡ್ ಆಗಿ ಸಹಸವಾರ ಸ್ಥಳದಲ್ಲೇ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ಮಣಿಪಾಲ- ಅಲೆವೂರು ರಸ್ತೆಯ ಮಂಚಿ ಇಳಿಜಾರಿನ ತಿರುವಿನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ.
ಮೃತ ಸಹಸವಾರನನ್ನು ಕಟಪಾಡಿ ನಿವಾಸಿ ಮೋಹನ್ (33) ಎಂದು ಗುರುತಿಸಲಾಗಿದೆ. ಬೈಕ್ ಸವಾರ ಪ್ರದೀಪ್ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಶನಿವಾರ ತಡರಾತ್ರಿ ಕಾಪುವಿನಿಂದ ಮಣಿಪಾಲ ಕಡೆಗೆ ಹೋಗಿ ಹಿಂದಿರುಗಿ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಬೈಕ್ ಸ್ಕಿಡ್ ಆದ ರಭಸಕ್ಕೆ ಸಹಸವಾರ ಪೊದೆಗೆ ಎಸೆಯಲ್ಪಟ್ಟಿದ್ದು, ಬೆಳಿಗ್ಗೆಯವರೆಗೆ ಯಾರು ನೋಡದ ಕಾರಣ ಸ್ಥಳದಲ್ಲೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…