ಪರಿಹಾರ ಮೊತ್ತ ಪಡೆಯುವುದಕ್ಕಾಗಿ ಪತಿಯನ್ನು ಹುಲಿ ದಾಳಿ ನಡೆಸಿ ಕೊಂದಿದೆ ಎಂದು ಕಥೆ ಕಟ್ಟಿದ ಚಲಾಕಿ ಪತ್ನಿ ಸಿಕ್ಕಿಬಿದ್ದ ಘಟನೆ ತಾಲ್ಲೂಕಿನ ಚಿಕ್ಕಹೆಜ್ಜೂರು ಸಮೀಪ ನಡೆದಿದೆ.
ಹುಣಸೂರು ಗ್ರಾಮಾಂತರ ಪೊಲೀಸರು ಮಳವಳ್ಳಿ ತಾಲೂಕು ಕದಂಪುರ ಗ್ರಾಮದ ನಿವಾಸಿ ವೆಂಕಟಸ್ವಾಮಿ ಕೊಲೆ ಮಾಡಿದ ಪ್ರಕರಣದಲ್ಲಿ ಸಲ್ಲಾಪುರಿ (40) ಯನ್ನು ಬಂಧಿಸಿದ್ದಾರೆ. ಕಾಡು ಪ್ರಾಣಿಗಳ ದಾಳಿಯಿಂದ ಮೃತಪಟ್ಟರೆ ಸರ್ಕಾರದಿಂದ ದೊರೆಯುವ 15 ಲಕ್ಷ ರೂ. ಪರಿಹಾರ ಮೊತ್ತ ಪಡೆಯಲು ಸಂಚು ರೂಪಿಸಿದ ಸಲ್ಲಾಪುರಿ, ಪತಿಯನ್ನು ಹತ್ಯೆಗೈದು ಹುಲಿ ಕೊಂದಿರುವ ಕಥೆ ಕಟ್ಟಿ ಪೊಲೀಸರನ್ನ ಯಾಮಾರಿಸಲು ಯತ್ನಿಸಿದ್ದಾಳೆ. ಹುಣಸೂರು ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಮುನಿಯಪ್ಪ ಮತ್ತು ತಂಡ ನಡೆಸಿದ ಖಡಕ್ ತೆನಿಖೆಯಲ್ಲಿ ಪತ್ನಿಯ ಸಂಚು ಬಯಲಾಗಿದೆ. ಪತಿಯನ್ನ ಹತ್ಯೆಗೈದ ಪತ್ನಿ ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ.
ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಹುಣಸೂರು ತಾಲೂಕಿನ ಹನಗೂಡು ಹೋಬಳಿಯ ಚಿಕ್ಕಹೆಜ್ಜೂರಿನ ಹಾಡಿಯಲ್ಲಿ(ಇದು ನಾಗರಹೊಳೆ ಕಾಡಿಂಚಿನ ಲ್ಲಿರುವ ಜಮೀನು) ಬೆಂಗಳೂರಿನ ಬಿಡದಿಯ ಅರುಣ್, ರವಿ ಮತ್ತಿಬ್ಬರು ಸ್ನೇಹಿತರು ಸೇರಿ 4-10 ಗುಂಟೆ ಜಮೀನನ್ನು ಖರೀದಿಸಿದ್ದರು. ಜಮೀನನ್ನು ನೋಡಿಕೊಳ್ಳಲು ಈ ದಂಪತಿಗಳನ್ನು ನೇಮಿಸಿದ್ದರು. ಜೀವನದಲ್ಲಿ ಐಷಾರಾಮಿ ಕನಸು ಕಾಣುತ್ತಿದ್ದ ಈಕೆ ಸರ್ಕಾರದ ಯೋಜನೆಗಳಲ್ಲಿ ಹಣ ಪಡೆಯುವ ಉದ್ದೇಶಗಳನ್ನ ಇಟ್ಟುಕೊಂಡು ಆಗಾಗ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುತ್ತಿದ್ದಳು. ಕಾಡುಪ್ರಾಣಿಗಳ ದಾಳಿಯಲ್ಲಿ ಮೃತಪಟ್ಟರೆ 15 ಲಕ್ಷ ಪರಿಹಾರ ದೊರೆಯವ ಯೋಜನೆಯ ಮಾಹಿತಿ ಈಕೆಗೆ ದೊರೆತಿದೆ. ಪತಿಯನ್ನು ಕೊಲೆಗೈಯ್ಯುವ ಸ್ಕೆಚ್ ತಯಾರಿಸಿದ ಸಲ್ಲಾಪುರಿ ಕಳೆದ ಮಂಗಳವಾರ ಪತ್ನಿಗೆ ವಿಷ ಹಾಕಿ ಕೊಂದಿದ್ದಾಳೆ. ನಂತರ ಮನೆಯಿಂದ ಮೃತದೇಹವನ್ನ ಹೊರಕ್ಕೆ ಎಳೆದೊಯ್ದು ವಿರೂಪಗೊಳಿಸಿ ಗುಂಡಿಯಲ್ಲಿ ಮುಚ್ಚಿಹಾಕಿ ಕಾಡು ಪ್ರಾಣಿ ದಾಳಿಯಿಂದ ಮೃತಪಟ್ಟಂತೆ ಬಿಂಬಿಸಿದ್ದಾಳೆ. ನಂತರ ಠಾಣೆಗೆ ಆಗಮಿಸಿ ಪತಿ ನಾಪತ್ತೆಯಾದ ಬಗ್ಗೆ ಮಿಸ್ಸಿಂಗ್ ಕಂಪ್ಲೇ0ಟ್ ಕೊಟ್ಟಿದ್ದಾಳೆ. ದೂರಿನಲ್ಲಿ ಹುಲಿ ಎಳೆದೊಯ್ದಿರಬಹುದೆಂದು ಅನುಮಾನ ವ್ಯಕ್ತಪಡಿಸಿದ್ದಾಳೆ. ಸಲ್ಲಾಪುರಿ ಮಾತನ್ನ ನಂಬಿದ ಪೊಲೀಸರು ಸ್ಥಳಕ್ಕೆ ಹೋಗಿ ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳ ನೆರವಿನಿಂದ ಹುಡುಕಾಟ ನಡೆಸಿದ್ದಾರೆ. ಹುಲಿ ದಾಳಿ ನಡೆಸಿದ ಯಾವುದೇ ಕುರುಹುಗಳು ಪೊಲೀಸರಿಗೆ ಸಿಕ್ಕಿಲ್ಲ. ಮಳೆ ಸುರಿದ ಕಾರಣ ಕುರುಹುಗಳು ನಾಶವಾಗಿರಬಹುದೆಂದು ಪೊಲೀಸರು ಊಹಿಸಿದ್ದಾರೆ. ಆದರೆ ಸಿಸಿ ಕ್ಯಾಮರಾದಲ್ಲಿ ಕೇವಲ ಪತ್ನಿ ಸಲ್ಲಾಪುರಿ ಮಾತ್ರ ಓಡಾಡಿರುವುದು ಕಂಡು ಬಂದಿದೆ. ಇನ್ ಸ್ಪೆಕ್ಟರ್ ಮುನಿಯಪ್ಪ ರವರು ಸಲ್ಲಾಪುರಿಯನ್ನು ತಿರ್ವ ವಿಚಾರಣೆಗೆ ಒಳಪಡಿಸಿದಾಗ ವಿಷ ಕೊಟ್ಟು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾಳೆ. ಕಾಡು ಪ್ರಾಣಿಗಳ ದಾಳಿಯಿಂದ ಮೃತಪಟ್ಟರೆ ಸರ್ಕಾರದಿಂದ ಸಿಗುವ 15 ಲಕ್ಷ ಪರಿಹಾರ ಹಣ ಪಡೆಯುವ ಹುನ್ನಾರದಿಂದ ಕೃತ್ಯ ನಡೆಸಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾಳೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಡಿಷನಲ್ ಎಸ್ಪಿ ಮಲ್ಲಿಕ್ ಹಾಗೂ ಡಿವೈಎಸ್ಪಿ ಗೋಪಾಲ ಕೃಷ್ಣ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಮುನಿಯಪ್ಪ, ರಾಧಾ, ಮಂಜು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…