ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿ ಎಂಟು ವರ್ಷಗಳ ಬಳಿಕ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

ಮಂಗಳೂರಿನ ಉರ್ವಾ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ದಾಖಲಾಗಿದ್ದ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಮತ್ತು ಕೊಲೆ ಯತ್ನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ನಿಯಾಜ್ ಶಿಯಾಸ್ ನಿಯಾ ಎಂಬಾತನನ್ನು ಬೆಂಗಳೂರಿನ ಹುಳಿಮಾವು ಅರಕೆರೆ ಎಂಬಲ್ಲಿ ವಶಕ್ಕೆ ಪಡೆದು ದಸ್ತಗಿರಿ ಮಾಡಲಾಗಿದೆ. ಮಂಗಳೂರು ಮತ್ತು ಉಡುಪಿ ಜಿಲ್ಲೆಯ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಒಟ್ಟು 13 ಪ್ರಕರಣಗಳು ಈತನ ವಿರುದ್ಧ ದಾಖಲಾಗಿದ್ದು, ಹಲವು ಕಡೆಯ ನ್ಯಾಯಾಲಯಗಳು ವಾರೆಂಟ್ ಹೊರಡಿಸಿದ್ದವು.



