ಜನ ಮನದ ನಾಡಿ ಮಿಡಿತ

Advertisement

ಸೌದಿ ಅರೇಬಿಯಾದಲ್ಲಿ ಬಸ್ಸುಗಳ ನಡುವೆ ಅಪಘಾತ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು.

ಸೌದಿ ಅರೇಬಿಯಾದಲ್ಲಿ ಬಸ್ಸುಗಳ ನಡುವೆ ನಡೆದ ಅಪಘಾತದಲ್ಲಿ ಉಳ್ಳಾಲ ಮಿಲ್ಲತ್ ನಗರದ ಯುವಕನೋರ್ವನು ದಾರುಣ ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ನಡೆದಿದೆ.

ಉಳ್ಳಾಲ ಮಿಲ್ಲತ್ ನಗರ ನಿವಾಸಿ ಮೊಹಮ್ಮದ್‌ರವರ ಪುತ್ರ ಅಬ್ದುಲ್ ರಾಝಿಕ್ (27) ಮೃತಪಟ್ಟ ಯುವಕ. ಸೌದಿ ಅರೇಬಿಯಾದಲ್ಲಿದ್ದ ರಾಝಿಕ್ ನಿನ್ನೆ (ಭಾನುವಾರ) ಸಂಜೆ, ಪಾಳಿ ಕೆಲಸಕ್ಕೆಂದು ತೆರಳುತ್ತಿದ್ದಾಗ ರಾಝಿಕ್ ಪ್ರಯಾಣಿಸುತ್ತಿದ್ದ ಬಸ್ ಗೆ ಮತ್ತೊಂದು ಬಸ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೊಹಮ್ಮದ್ ಅವರ ಕೊನೆಯ ಪುತ್ರನಾಗಿರುವ ರಾಝಿಕ್ ಸಿವಿಲ್ ಇಂಜಿನಿಯರಿ0ಗ್ ಕೋರ್ಸ್ ಮುಗಿಸಿ ವಿದೇಶಕ್ಕೆ ತೆರಳಿದ್ದರು. ಜುಬೈಲ್‌ನಲ್ಲಿ ಪೋಲಿಟೆಕ್ ಕಂಪೆನಿಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ ಅವರು ಕಳೆದ ಜುಲೈ 11 ರಂದು ಊರಿಗೆ ಬಂದಿದ್ದರು. ಒಂದು ತಿಂಗಳ ರಜೆ ಮುಗಿಸಿ ಆಗಸ್ಟ್ 15 ರಂದು ಎರಡನೇ ಬಾರಿ ಮತ್ತೆ ವಿದೇಶಕ್ಕೆ ತೆರಳಿದ್ದರು. ರಾಝಿಕ್ ಅವರ ಸಹೋದರ, ಹಾಗೂ ಸಹೋದರಿ ಅನಾರೋಗ್ಯದಿಂದ ಈ ಹಿಂದೆ ಮೃತಪಟ್ಟಿದ್ದರು. ಮೃತ ರಾಝಿಕ್ ತಂದೆ ತಾಯಿ, ಮೂವರು ಸಹೋದರಿಯರು, ಓರ್ವ ಸಹೋದರನನ್ನ ಅಗಲಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!