ಕೆಎಸ್ ಆರ್ ಟಿಸಿ ಬಸ್ ನಲ್ಲಿ ಯುವತಿಗೆ ಕಿರುಕುಳ ನೀಡಿದ್ದ ಆರೋಪಿ ಮೊಹಮ್ಮದ್ ಸತ್ತಾರ್‌ಗೆ 4 ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ. ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿಯೊಬ್ಬಳಿಗೆ ಕಿರುಕುಳ ನೀಡಿದ್ದ ಪ್ರಕರಣದಲ್ಲಿ ಆರೋಪಿ ಮಾಡ್ನೂರು ಗ್ರಾಮದ ಮೊಹಮ್ಮದ್ ಸತ್ತಾರ್ ಎಂಬಾತನಿಗೆ 4 ತಿಂಗಳು ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ.

ಸುಳ್ಯದಿಂದ ಪುತ್ತೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬರು, ‘ಪಕ್ಕದಲ್ಲಿ ಕುಳಿತಿದ್ದ ಮೊಹಮ್ಮದ್ ಸತ್ತಾರ್ ಕಿರುಕುಳ ನೀಡಿದ್ದ’ ಎಂದು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು. ಆಗಿನ ಠಾಣಾಧಿಕಾರಿ ರಾಜೇಶ್ ಕೆ.ವಿ ಅವರು ಪ್ರಕರಣದ ತನಿಖೆ ನಡೆಸಿ, ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಸಿದ ಪುತ್ತೂರಿನ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶರಾದ ಪ್ರಕೃತಿ ಕಲ್ಯಾಣಪುರ್ ಅವರು ಮೊಹಮ್ಮದ್ ಸತ್ತಾರ್‌ಗೆ 4 ತಿಂಗಳ ಜೈಲು ಶಿಕ್ಷೆ ನೀಡಿದ್ದಾರೆ.



