ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಇದರ ಸಹಯೋಗದಲ್ಲಿ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವು ಪಾಣಾಜೆ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಭವನದಲ್ಲಿ ಮಾತೆಯರಿಂದ ದೀಪವನ್ನು ಬೆಳಗಿಸುವ ಮೂಲಕ ಉದ್ಘಾಟನೆಗೊಂಡಿದೆ.
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ ಮಾತನಾಡಿ ಶ್ರೀನಿವಾಸ ಕಲ್ಯಾಣೋತ್ಸವದ ಎರಡು ದಿವಸಗಳ ಕಾರ್ಯಕ್ರಮದ ಸಂಪೂರ್ಣ ವಿವರಣೆ ನೀಡಿ, ಆರ್ಲಪದವು ಜನತೆಯ ಸಂಪೂರ್ಣ ಸಹಕಾರ ಕೋರಿದ್ದಾರೆ. ಹೊರೆಕಾಣಿಕೆ ಸಂಚಾಲಕರಾದ ಅನಿಲ್ ಕಣ್ಣರ್ನೋಜಿ ಮಾತನಾಡಿ ಈ ಎರಡು ದಿವಸಗಳ ಕಾರ್ಯಕ್ರಮಕ್ಕೆ ಪ್ರತಿ ಮನೆಯಿಂದ ಹೊರೆಕಾಣಿಕೆಯನ್ನು ಸೇವೆಯ ಮೂಲಕ ನೀಡಿ ಶ್ರೀನಿವಾಸ ದೇವರ ಕೃಪೆಗೆ ಪಾತ್ರರಾಗಬೇಕಾಗಿ ತಿಳಿಸಿದ್ರು. ಇನ್ನು ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ಪ್ರೇಮರಾಜ್ ಆರ್ಲಪದವು, ಕೋಶಾಧಿಕಾರಿ ರೂಪೇಶ್ ನಾಯ್ಕ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…