ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮಗಳ ಕುತ್ತಿಗೆ ಬಿಗಿಹಿಡಿದು ಉಸಿರುಗಟ್ಟಿಸಿ ಕೊ*ಲೆ ಮಾಡಿದ ಕ್ರೂರಿ ತಾಯಿ…!

ತಾಯಿಯೋರ್ವಳು ಮಗಳನ್ನೇ ಹತ್ಯೆಗೈದಿರುವ ಘಟನೆ ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದ ಕಾನಂಗಿ ಎಂಬಲ್ಲಿ ವರದಿಯಾಗಿದೆ.

17 ವರ್ಷದ ಶಿಫನಾಜ್ ಕೊಲೆಯಾದ ಯುವತಿ. ಶಿಫನಾಜ್ ತನ್ನ ಸ್ನೇಹಿತನನ್ನು ಭೇಟಿಯಾಗಲು ಉಡುಪಿಗೆ ಹೋಗಿ ಬರುವುದಾಗಿ ತಾಯಿಯಲ್ಲಿ ಹೇಳಿದ್ದಳು ಅದಕ್ಕೆ ತಾಯಿ ಗುಲ್ಝಾರ್ ಬಾನು ನಿರಾಕರಿಸಿದ್ದಳು. ಇದರಿಂದ ತಾಯಿ ಹಾಗೂ ಮಗಳ ಮಧ್ಯೆ ಜಗಳವಾಗಿ ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿದೆ. ಮಗಳ ಕುತ್ತಿಗೆ ಬಿಗಿಹಿಡಿದು ಉಸಿರುಗಟ್ಟಿಸಿ ಶಿಫನಾಜ್‌ಳನ್ನು ಹತ್ಯೆ ಮಾಡಲಾಗಿದೆ. ಶಿಫನಾಜ್ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಕುರಿತು ಶಿಫನಾಜ್ ತಂದೆ ಶೇಖ್ ಮುಸ್ತಾಫ್ ದೂರು ನೀಡಿದ್ದಾರೆ. ಬಳಿಕ, ಶಿಫನಾಜ್ ಸಾವು ಆತ್ಮಹತ್ಯೆಯಲ್ಲ. ಉಸಿರುಗಟ್ಟಿಸಿ ಆಕೆಯನ್ನು ಕೊಲೆ ಮಾಡಲಾಗಿದೆ ಎನ್ನುವ ವರದಿ ಪೋಸ್ಟ್ ಮಾರ್ಟಂನಿಂದ ತಿಳಿದುಬಂತು. ಸಾವಿನ ಸತ್ಯ ಸಂಗತಿ ಪೋಸ್ಟ್ ಮಾರ್ಟಂನಿಂದ ಬಹಿರಂಗಗೊಳ್ಳುತ್ತಿದ್ದಂತೆ ಗುಲ್ಝಾರ್ ಬಾನುಳನ್ನು ಪೊಲೀಸರು ತೀವ್ರ ವಿಚಾರಣೆ ನಡೆಸಿದ್ರು. ಈ ವೇಳೆ ತಾನು ಕೊಲೆ ಮಾಡಿರುವ ವಿಚಾರ ಒಪ್ಪಿಕೊಂಡಿದ್ದಾಳೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!