ತಾಯಿಯೋರ್ವಳು ಮಗಳನ್ನೇ ಹತ್ಯೆಗೈದಿರುವ ಘಟನೆ ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದ ಕಾನಂಗಿ ಎಂಬಲ್ಲಿ ವರದಿಯಾಗಿದೆ.
17 ವರ್ಷದ ಶಿಫನಾಜ್ ಕೊಲೆಯಾದ ಯುವತಿ. ಶಿಫನಾಜ್ ತನ್ನ ಸ್ನೇಹಿತನನ್ನು ಭೇಟಿಯಾಗಲು ಉಡುಪಿಗೆ ಹೋಗಿ ಬರುವುದಾಗಿ ತಾಯಿಯಲ್ಲಿ ಹೇಳಿದ್ದಳು ಅದಕ್ಕೆ ತಾಯಿ ಗುಲ್ಝಾರ್ ಬಾನು ನಿರಾಕರಿಸಿದ್ದಳು. ಇದರಿಂದ ತಾಯಿ ಹಾಗೂ ಮಗಳ ಮಧ್ಯೆ ಜಗಳವಾಗಿ ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿದೆ. ಮಗಳ ಕುತ್ತಿಗೆ ಬಿಗಿಹಿಡಿದು ಉಸಿರುಗಟ್ಟಿಸಿ ಶಿಫನಾಜ್‌ಳನ್ನು ಹತ್ಯೆ ಮಾಡಲಾಗಿದೆ. ಶಿಫನಾಜ್ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಕುರಿತು ಶಿಫನಾಜ್ ತಂದೆ ಶೇಖ್ ಮುಸ್ತಾಫ್ ದೂರು ನೀಡಿದ್ದಾರೆ. ಬಳಿಕ, ಶಿಫನಾಜ್ ಸಾವು ಆತ್ಮಹತ್ಯೆಯಲ್ಲ. ಉಸಿರುಗಟ್ಟಿಸಿ ಆಕೆಯನ್ನು ಕೊಲೆ ಮಾಡಲಾಗಿದೆ ಎನ್ನುವ ವರದಿ ಪೋಸ್ಟ್ ಮಾರ್ಟಂನಿಂದ ತಿಳಿದುಬಂತು. ಸಾವಿನ ಸತ್ಯ ಸಂಗತಿ ಪೋಸ್ಟ್ ಮಾರ್ಟಂನಿಂದ ಬಹಿರಂಗಗೊಳ್ಳುತ್ತಿದ್ದಂತೆ ಗುಲ್ಝಾರ್ ಬಾನುಳನ್ನು ಪೊಲೀಸರು ತೀವ್ರ ವಿಚಾರಣೆ ನಡೆಸಿದ್ರು. ಈ ವೇಳೆ ತಾನು ಕೊಲೆ ಮಾಡಿರುವ ವಿಚಾರ ಒಪ್ಪಿಕೊಂಡಿದ್ದಾಳೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…