ಪ್ರಕೃತಿಯಲ್ಲಿ ಮತ್ತು ಕಲಾ ಪ್ರಕಾರಗಳಲ್ಲಿ ನಮ್ಮ ಹಿರಿಯರು ಭಗವಂತನ ಅನುಸಂಧಾನ ಕಂಡುಕೊಂಡಿದ್ದರು ಎಂದು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದ್ದಾರೆ.

ಉಡುಪಿ ಜಿಲ್ಲೆಯ ಪರ್ಕಳದಲ್ಲಿ ವಿಜಯದಶಮಿಯಂದು ಸರಿಗಮ ಭಾರತಿ ಏರ್ಪಡಿಸಿದ ವಿಜಯದಶಮಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದ ಕಾರ್ಣಿಕ್, ಇಂದಿನ ಒತ್ತಡದ ಬದುಕಿನ ಮಧ್ಯೆ ಎಲ್ಲರದ್ದು ಆನಂದದ ಹುಡುಕಾಟ. ಯಾವುದೇ ಕಾರ್ಯಕ್ರಮ ನಡೆಯಲಿ ಇದರಿಂದ ನನಗೆ ಲಾಭ ಏನಿದೆ ಎನ್ನುವ ಪ್ರಶ್ನೆ ನಮ್ಮನ್ನೆಲ್ಲ ಕಾಡುವುದು ಸಹಜ. ಆದರೆ ಅದನ್ನು ಮೀರಿ ಈ ಕಾರ್ಯಕ್ರಮದಲ್ಲಿ ನನ್ನ ಪಾತ್ರವೇನಿದೆ, ನಾನು ಮಾಡಬೇಕಾದ ಕೆಲಸ ಏನಿದೆ ಎನ್ನುವ ಬಗ್ಗೆ ನಾವು ಚಿಂತಿಸಿ ಆ ಕೆಲಸದಲ್ಲಿ ತೊಡಗಿಸಿ ಕೊಂಡಾಗ ಮಾತ್ರ ನಿರಾಯಾಸವಾಗಿ ಆನಂದ ನಮಗೆ ಸಿಗಬಲ್ಲದು ಎಂದ್ರು. ಇನ್ನು ಈ ಸಂದರ್ಭದಲ್ಲಿ ಸರಿಗಮ ಭಾರತಿಯ ಉದಯ ಶಂಕರ್, ಶ್ರೀಮತಿ ಶಕುಂತಲಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



