ಮಲ್ಪೆ ಬೀಚ್ ನಲ್ಲಿ ಈಜಾಡುತ್ತಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಸಂಭವಿಸಿದೆ. ಹಾಸನ ಮೂಲದ ಮಿಥುನ್ ಮತ್ತು ಶಶಾಂಕ್ ನೀರುಪಾಲಾಗಿದ್ದಾರೆ.
ಇದನ್ನು ಗಮನಿಸಿದ ಸಹ ಪ್ರವಾಸಿಗರು ಶಶಾಂಕ್ ನನ್ನು ರಕ್ಷಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆತ ಕೊನೆಯುಸಿರೆಳೆದಿದ್ದಾನೆ. ಮಿಥುನ್ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಶೋಧಕಾರ್ಯ ಮುಂದುವರಿದಿದೆ. ದಸರಾ ರಜೆ ಹಿನ್ನೆಲೆಯಲ್ಲಿ ಸಹಸ್ರ ಸಂಖ್ಯೆಯಲ್ಲಿ ಪ್ರವಾಸಿಗರು ಉಡುಪಿಗೆ ಆಗಮಿಸುತ್ತಿದ್ದಾರೆ. ಸಾವಿರಾರು ಜನರಿಗೆ ಕೇವಲ ಈಜು ಬರದ ಮೂರು ಲೈಫ್ ಗಾರ್ಡ್ ನಿಯೋಜನೆ ಮಾಡಿದ್ದು, ಮಲ್ಪೆ ಬೀಚ್ ನಿರ್ವಹಣೆ ಬಗ್ಗೆ ಉಡುಪಿ ಜಿಲ್ಲಾಡಳಿತ ಭಾರೀ ನಿರ್ಲಕ್ಷ್ಯ ತೋರುತ್ತಿದೆ. ಎಂಬ ಆರೋಪ ಕೇಳಿಬಂದಿದೆ. ಕಳೆದ ಒಂದು ವಾರದಿಂದ ಜಿಲ್ಲಾಡಳಿತ ಜಲಕ್ರೀಡೆ ಬಂದ್ ಮಾಡಿದೆ. ಇದ್ರಿಂದ ನೂರಾರು ಸಂಖ್ಯೆಯಲ್ಲಿ ಇದ್ದ ಲೈಫ್ ಗಾರ್ಡ್ಗಳು ವಾಪಸ್ ಮನೆಗೆ ಹೋಗಿದ್ದಾರೆ. ಜಿಲ್ಲಾಡಳಿತದ ಭಾರೀ ನಿರ್ಲಕ್ಷ್ಯಕ್ಕೆ ಪ್ರವಾಸಿಗರು ಬಲಿಯಾಗುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…