ಮಂಗಳೂರು ವಿ.ವಿ. ಮಾಜಿ ಉಪಕುಲಪತಿ ( ಪ್ರಭಾರ ), ಪ್ರಸ್ತುತ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶನಾಲಯದ ಮುಖ್ಯಸ್ಥರು ಆಗಿದ್ದ ಡಾ. ಕಿಶೋರ್ ಕುಮಾರ್ ಅಕ್ಟೋಬರ್ 5 ರಂದು ಮುಂಜಾನೆ ನಿಧನರಾದರು.

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಕೆಲದಿನಗಳ ಹಿಂದೆ ಬ್ರೈನ್ ಹ್ಯಾಮರೇಜ್‌ಗೆ ಒಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಪಾರ ಸಂಖ್ಯೆಯ ಕ್ರೀಡಾ ವಿದ್ಯಾರ್ಥಿ ಸ್ನೇಹಿತರನ್ನು ಕಿಶೋರ್ ಹೊಂದಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ಕ್ರೀಡಾ ಪ್ರಭೆಯನ್ನು ರಾಷ್ಟ್ರೀಯ ಮಟ್ಟದಲ್ಲಿ ವಿಸ್ತರಿಸುವುದಕ್ಕೆ ಕಾರಣಕರ್ತರಾದವರು. ಇವರು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಹಿರಿಯ ವಿದ್ಯಾರ್ಥಿ ಕೂಡ ಹೌದು. ಕಿಶೋರ್ ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.



