ಕೊಡವೂರು ಸಾಲ್ಮರದ ಮನೆಯಲ್ಲಿ ನಡೆದ ಎಕೆಎಂಎಸ್ ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಮಹಿಳೆಯನ್ನು ಬಡಗಬೆಟ್ಟು ಮಿಷನ್ ಕಂಪೌಂಡ್ ನಿವಾಸಿ ರಿಧಾ ಶಭಾನಾ ಎಂದು ಗುರುತಿಸಲಾಗಿದ್ದು. ಈಕೆ ಕೊಲೆಗೆ ಒಳಸಂಚು ರೂಪಿಸಿ ಕೃತ್ಯದಲ್ಲಿ ಭಾಗಿಯಾಗಿದ್ದ ಮೊದಲ ಆರೋಪಿ ಫೈಜಲ್ ಖಾನ್ ಪತ್ನಿಯಾಗಿದ್ದಾಳೆ. ಪೊಲೀಸರು ಈಕೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಉಡುಪಿ ಮಿಷನ್ ಕಂಪೌಂಡ್ ಬಳಿಯ ನಿವಾಸಿ ಮಹಮದ್ ಫೈಸಲ್ ಖಾನ್, ಉಡುಪಿ ಕರಂಬಳ್ಳಿ ಜನತಾ ಕಾಲೋನಿಯ ಮೊಹಮದ್ ಶರೀಫ್, ಸುರತ್ಕಲ್ ಕೃಷಾಪುರದ ಏಳನೇ ಬ್ಲಾಕ್ ನಿವಾಸಿ ಅಬ್ದುಲ್ ಶುಕೂರು ಯಾನೆ ಅದ್ದು ಅವರನ್ನು ಬಂಧಿಸಿದ್ದಾರೆ. ಇದರಲ್ಲಿ ಶರೀಫ್ ಹಾಗೂ ಅದ್ದು ಎಕೆಎಂಎಸ್ ಬಸ್‌ನಲ್ಲಿ ಚಾಲಕರಾಗಿ ದುಡಿಯುತ್ತಿದ್ದರೆ, ಫೈಸಲ್ ಖಾನ್, ಸೈಫ್‌ನ ಆತ್ಮೀಯನಾಗಿದ್ದನು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…