ಬೃಹತ್ ಗಾತ್ರದ ಮರದ ಕೊಂಬೆ ಬಿದ್ದು ಯುವತಿ ಸಾ*ವನ್ನಪ್ಪಿರುವ ಘಟನೆ ಬೆಂಗಳೂರಿನ ಸೋಲದೇವನ ಹಳ್ಳಿಯಲ್ಲಿ ನಡೆದಿದೆ.
24 ವರ್ಷದ ಕೀರ್ತನಾ ಸಾ*ವನ್ನಪ್ಪಿರುವ ಯುವತಿ. ಹೆಬ್ಬಾಳ ಮೂಲದ ಯುವತಿ ಕೀರ್ತನಾ ಮತ್ತು ಆಕೆಯ ಸ್ನೇಹಿತೆ ಬೆಂಗಳೂರಿನ ಆಚಾರ್ಯ ಕಾಲೇಜಿನಲ್ಲಿ ನಡೆಯುತ್ತಿದ್ದ ಸ್ಯಾಂಡಲ್ ವುಡ್ ಕ್ರಿಕೆಟ್ ಪ್ರೀಮಿಯರ್ ಲೀಗ್ ನೋಡೋಕೆ ಹೋಗಿದ್ರು. ಕ್ರಿಕೆಟ್ ಮ್ಯಾಚ್ ನೋಡಿ ಕೊಂಡು ವಾಪಸ್ ಬರ್ತಿದ್ದ ವೇಳೆ ಎರಡು ಬೈಕ್ ಗಳ ಮೇಲೆ ಮರದ ಕೊಂಬೆ ಬಿದ್ದಿದೆ. ಈ ವೇಳೆ ಕೀರ್ತನಾ ಸ್ಥಳದಲ್ಲೇ ಮೃತಪಟ್ಟರೆ ಆಕೆಯ ಸ್ನೇಹಿತೆ ಮತ್ತು ಮತ್ತೊಂದು ಬೈಕ್‌ನಲ್ಲಿದ್ದ ಭಾಸ್ಕರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಇಬ್ಬರನ್ನು ಇಲ್ಲಿನ ಸಪ್ತಗಿರಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಮುಂದುವರೆದಿದೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…