ಪುತ್ತೂರು ತಾಲ್ಲೂಕು ಮುಂಡೂರು ಗ್ರಾಮ ಪಂಚಾಯತ್ ವಠಾರದಲ್ಲಿ ತ್ಯಾಜ್ಯರಾಶಿ ಹಾಗೂ ಗ್ರಾ.ಪಂ ವಠಾರದಲ್ಲಿ ಸ್ವಚ್ಛತೆ ಮಾಡದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಪಂಚಾಯತಿಗೆ ದಿಢೀರ್ ಗ್ರಾ.ಪಂಗೆ ಭೇಟಿ ನೀಡಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಆಚಾರ್ಯ ಹಾಗೂ ಮಾಜಿ ಅಧ್ಯಕ್ಷ ಸುಪ್ರೀತ್ ಕಣ್ಣಾರಾಯ ನೇತೃತ್ವದಲ್ಲಿ ಗ್ರಾ.ಪಂಗೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು ಪಿಡಿಓ ಮನ್ಮಥ ಅಜಿರಂಗಳ ಜೊತೆ ಹಾಗೂ ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ ಎನ್‌ಎಸ್‌ಡಿ ಜೊತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗ್ರಾ.ಪಂ ವಠಾರದಲ್ಲೇ ಕಸದ ರಾಶಿ ತುಂಬಿದ್ದರೂ ಗ್ರಾ.ಪಂನಿಂದ ಬೇರೆಡೆ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದ್ದು ಇದನ್ನು ನೋಡುವಾಗ ನಾಚಿಕೆಯಾಗುತ್ತಿದೆ ಎಂದು ಸುಪ್ರೀತ್ ಕಣ್ಣಾರಾಯ ಹೇಳಿದ್ದಾರೆ. ಪ್ರವೀಣ್ ಆಚಾರ್ಯ ನರಿಮೊಗರು ಮಾತನಾಡಿ ಗ್ರಾ.ಪಂ ವಠಾರದಲ್ಲಿ ಕಸದ ರಾಶಿ ತುಂಬಿದೆ, ಶೌಚಾಲಯದ ಅವಸ್ಥೆ ಹೇಳತೀರದಾಗಿದೆ, ಗ್ರಾ.ಪಂ ಅಂಗಳದಲ್ಲಿ ಪಾಚಿ ಹಿಡಿದು ಇತ್ತೀಚೆಗೆ ಮಹಿಳೆಯೊಬ್ಬರು ಬಿದ್ದು ಕಾಲು ಮುರಿತಕ್ಕೊಳಗಾಗಿದ್ದರೂ ಕೂಡಾ ಅದಕ್ಕೆ ಬೀಚಿಂಗ್ ಪೌಡರ್ ಹಾಕಲು ಪಂಚಾಯತ್‌ನಿಂದ ಸಾಧ್ಯವಾಗಿಲ್ಲ, ಇದೆಲ್ಲವೂ ಗ್ರಾ.ಪಂ ನಿರ್ಲಕ್ಷ್ಯ ಮತ್ತು ಆಡಳಿತ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದ್ರು. ಇನ್ನೂ ಈ ಸಂದರ್ಭದಲ್ಲಿ ಕಮಲೇಶ್ ಎಸ್.ವಿ, ಸುಪ್ರೀತ್ ಕಣ್ಣಾರಾಯ, ಪ್ರವೀಣ್ ಆಚಾರ್ಯ, ಜಯಾನಂದ ಆಳ್ವ ಪಟ್ಟೆ, ಮಹಮ್ಮದ್ ಮುಂಡೂರು, ನೀಲಪ್ಪ ನಾಯ್ಕ ಅಂಬಟ ಉಪಸ್ಥಿತರಿದ್ದರು.



