ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಕೆ-ಕೋಕಾ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಕೊಳತ್ತಮಜಲು ಅಬ್ದುಲ್ ರಹ್ಮಾನ್‌ರನ್ನು ಕೊಲೆ ಮಾಡಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದೀಪಕ್, ಚಿಂತನ್, ಪೃಥ್ವಿರಾಜ್ ಜೋಗಿ, ಸುಮಿತ್ ಬಿ. ಆಚಾರ್ಯ, ವಿ.ರವಿರಾಜ ಮೂಲ್ಯ, ಅಭಿನ್ ರೈ, ತೇಜಾಕ್ಷ, ರವಿಸಂಜಯ್ ಜಿ.ಎಸ್, ಶಿವಪ್ರಸಾದ್ ತುಂಬೆ, ಪ್ರದೀಪ, ಶಾಹಿತ್, ಸಚಿನ್ ರೊಟ್ಟಿಗುಡ್ಡೆ, ರಂಜಿತ್ ಎಂಬವರನ್ನು ಬಂಧಿಸಿದ್ದರು. ಆರೋಪಿಗಳು ಇದೀಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಪುದು ಗ್ರಾಮದ ಭರತ್ ರಾಜ್ ಯಾನೆ ಭರತ್ ಎಂಬಾತ ತಲೆ ಮರೆಸಿಕೊಂಡಿದ್ದು, ಆತನ ಬಂಧನವಾಗಲು ಬಾಕಿ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಹಲವು ವರ್ಷಗಳಿಂದ ಕೊಲೆ, ಕೊಲೆಯತ್ನ, ಪ್ರಚೋದನಕಾರಿ ಭಾಷಣಗಳು ಸಹಿತ ಕಾನೂನು ಬಾಹಿರ ಚಟುವಟಿಕೆಗಳಲಿಪಾಲ್ಗೊಂಡಿದ್ದು, ಸಮಾಜದಲ್ಲಿ ಅಶಾಂತಿ ಮತ್ತು ಕೋಮು ಸಂಘರ್ಷಕ್ಕೆ ಕಾರಣರಾಗಿದ್ದಾರೆ. ಹೀಗಾಗಿ, ಅವರ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…